ಸೋಮೇಶ್ವರ ಬೀಚ್‌ನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ
Thursday, January 22, 2026
ಮಂಗಳೂರು: ಕರಾವಳಿ ಉತ್ಸವದ ಅಂಗವಾಗಿ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮ ಜ.23ರಂದು ಸೋಮೇಶ್ವರ ಬೀಚ್‌ನಲ್ಲಿ ನಡೆಯಲಿದೆ.
ಜಿಲ್ಲೆಯ ಆಯ್ದ ಪ್ರೌಢಶಾಲೆ, ಪದವಿಪೂರ್ವ ಹಾಗೂ ಪದವಿ ಕಾಲೇಜು, ವಿದ್ಯಾರ್ಥಿಗಳಿಂದ ವೈವಿಧ್ಯಮಯ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರದರ್ಶನಗೊಳ್ಳಲಿವೆ.
ಶುಕ್ರವಾರ ಸಂಜೆ 5.30 ರಿಂದ ಕಾರ್ಯಕ್ರಮ ಪ್ರಾರಂಭವಾಗಲಿದೆ. ಇದಕ್ಕಾಗಿ ಸೋಮೇಶ್ವರ ಕಡಲ ಕಿನಾರೆಯಲ್ಲಿ ಆಕರ್ಷಕ ವೇದಿಕೆ ಹಾಗೂ ಸಿದ್ಧತೆಗಳನ್ನು ಏರ್ಪಡಿಸಲಾಗಿದೆ.