ಯುವತಿಯರು ವಿದ್ಯಾಭ್ಯಾಸದ ನಂತರ ಉದ್ಯಮದ ಕಡೆ ಮುಖ ಮಾಡಬೇಕು: ಆತ್ಮಿಕಾ ಅಮಿನ್

ಯುವತಿಯರು ವಿದ್ಯಾಭ್ಯಾಸದ ನಂತರ ಉದ್ಯಮದ ಕಡೆ ಮುಖ ಮಾಡಬೇಕು: ಆತ್ಮಿಕಾ ಅಮಿನ್


ಮಂಗಳೂರು: ನಮಗೆ ಜೀವನದಲ್ಲಿ ಹಲವಾರು ಅವಕಾಶಗಳು ಸಿಗುತ್ತವೆ. ಅವುಗಳನ್ನು ನಾವು ಸದುಪಯೋಗಪಡಿಸಿಕೊಳ್ಳಬೇಕು. ಯುವತಿಯರು ತಮ್ಮ ವಿದ್ಯಾಭ್ಯಾಸವನ್ನು ಸಂಪೂರ್ಣಗೊಳಿಸಿದ ಬಳಿಕ ಉದ್ಯಮದ ಕಡೆಗೆ ಮುಖ ಮಾಡಬೇಕಾದ ಅಗತ್ಯವಿದೆ ಎಂದು ಮಂಗಳೂರಿನ ಜೆ.ವಿ. ಗ್ರೂಪ್ ಆಫ್ ಕಂಪನೀಸ್‌ನ ನಿರ್ದೇಶಕಿ ಆತ್ಮಿಕಾ ಅಮಿನ್ ಹೇಳಿದರು.


ಮಂಗಳೂರು ರಾಮಕೃಷ್ಣ ಮಠದ ಸ್ವಾಮಿ ವಿವೇಕಾನಂದ ಸಭಾಂಗಣದಲ್ಲಿ ಮಂಗಳೂರು ರಾಮಕೃಷ್ಣ ಮಿಷನ್‌ನ ಅಮೃತ ಮಹೋತ್ಸವದ ಸುಸಂದರ್ಭದಲ್ಲಿ ನಡೆದ ‘ಶಕ್ತಿ’ ಮಹಿಳಾ ಸಬಲೀಕರಣ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.


ಮಹಿಳೆಯರಲ್ಲಿ ಅಂತರ್ಗತವಾದ ಕೌಶಲ್ಯವಿದೆ. ಅದನ್ನು ಸದುಪಯೋಗ ಪಡಿಸಿಕೊಳ್ಳುವ ಬಗ್ಗೆ ಪ್ರತಿಯೊಬ್ಬರು ಗಮನಹರಿಸಬೇಕು. ಉದ್ಯಮಶೀಲತೆ ಎಂದರೆ ಸೋಲುಗಳನ್ನು ಸ್ವೀಕರಿಸಿ ಅದರಲ್ಲಿ ಮುಂದುವರಿಯುವುದು. ಸಾಮಾಜಿಕ ಜಾಲತಾಣದ ಮೂಲಕ ಹಲವಾರು ಮಾಹಿತಿಗಳು ಇಂದು ನಮಗೆ ಸಿಗುತ್ತದೆ. ಹಲವಾರು ಅವಕಾಶಗಳು ನಮ್ಮ ಮುಂದಿವೆ. ಅವುಗಳನ್ನು ನಾವು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಬೇಕಾಗಿದೆ. ಇಂದು ಮಹಿಳೆಯರು ಹಲವಾರು ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿದ್ದಾರೆ. ನಾವು ಉನ್ನತ ಸ್ಥಾನಕ್ಕೇರಬೇಕಾದರೆ ಗುರಿಯನ್ನು ತಲುಪುವ ಬಲವಾದ ಆತ್ಮಸ್ಥೈರ್ಯ ನಮ್ಮಲ್ಲಿರಬೇಕು. ದೊಡ್ಡ ಕನಸುಗಳು ನಮ್ಮದಾಗಲಿ ಮತ್ತು ಅವುಗಳನ್ನು ಸಾಧಿಸಲು ಅವಿರತವಾಗಿ ಪ್ರಯತ್ನಿಸೋಣ ಎಂದರು.


ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಮಂಗಳೂರಿನ ಮಂಗಳ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷೆ ಡಾ. ಅನಿತಾ ಜಿ. ಭಟ್ ಮಾತನಾಡಿ, ನಮ್ಮ ದೇಶದ ಜನಸಂಖ್ಯೆಯಲ್ಲಿ ಶೇಕಡ. 50 ರಷ್ಟು ಮಹಿಳೆಯರಿದ್ದಾರೆ. ಎಲ್ಲಿಯವರೆಗೆ ಮಹಿಳಾ ಸಬಲೀಕರಣವಾಗುವುದಿಲ್ಲವೋ, ಅಲ್ಲಿಯವರೆಗೆ ದೇಶದ ಸಬಲೀಕರಣ ಸಾಧ್ಯವಿಲ್ಲ. ಸಮಾಜದ ಪ್ರತಿಯೊಂದು ಆಯಾಮದಲ್ಲಿ ಮಹಿಳೆಯರು ಇಂದು ಮುಂಚೂಣಿಯಲ್ಲಿದ್ದಾರೆ. ಇಂದಿನ ಯುವ ಜನಾಂಗವು ದೇಶದ ಬೆಳವಣಿಗೆಯಲ್ಲಿ ಮಹತ್ತರ ಪಾತ್ರ ವಹಿಸುತ್ತದೆ.  ಮಹಿಳಾ ಸಬಲೀಕರಣವಾದಾಗ ಮಾತ್ರ ರಾಷ್ಟ್ರದ ಬೆಳವಣಿಗೆ ಸಾಧ್ಯ. ಇಂದಿನ ಯುವ ಜನಾಂಗ ಕೌಶಲ್ಯಯುತರಾಗುದರೊಂದಿಗೆ ಉನ್ನತ ಮೌಲ್ಯಗಳನ್ನು ತಮ್ಮದಾಗಿಸಬೇಕು ಎಂದು ಹೇಳಿದರು.


ಉತ್ತರಾಖಂಡದ ಮಾಯಾವತಿಯ ಅದ್ವೈತ ಆಶ್ರಮದ ಪ್ರಬುದ್ಧ ಭಾರತ ಮಾಸಪತ್ರಿಕೆಯ ಸಹ ಸಂಪಾದಕ ಸ್ವಾಮಿ ಜ್ಞಾನೀಶಾನಂದಜಿ ಅವರು ದಿವ್ಯ ಸಾನ್ನಿಧ್ಯ ವಹಿಸಿದ್ದರು. ಮಂಗಳೂರು ರಾಮಕೃಷ್ಣ ಮಿಷನ್‌ನ ಕಾರ್ಯದರ್ಶಿಗಳಾದ ಸ್ವಾಮಿ ಜಿತಕಾಮಾನಂದಜಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.






Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article