ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
Thursday, January 22, 2026
ಮಂಗಳೂರು: ಕಳೆದ 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
ಬಂಧಿತನನ್ನು ಹಾಸನ ಚನ್ನರಾಯಪಟ್ಟಣ ನಿವಾಸಿ ಎಸ್.ಎನ್. ಚಂದ್ರೆಗೌಡ ಎಂದು ಗುರುತಿಸಲಾಗಿದೆ.
ಬೆಳ್ತಂಗಡಿ ಪೊಲೀಸ್ ಠಾಣಾ ಅ.ಕ್ರ: 60/2009, ಕಲಂ:420 ಐಪಿಸಿ ಪ್ರಕರಣದಲ್ಲಿ, ಬಯೋಗ್ಯಾಸ್ ಸಂಪರ್ಕ ಮಾಡಿಸುವುದಾಗಿ ನಂಬಿಸಿ, ಹಣ ಪಡೆದು ಮೋಸ ಮಾಡಿದ ಪ್ರಕರಣದಲ್ಲಿ, ಸುಮಾರು 10 ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಹಾಸನ ಚನ್ನರಾಯಪಟ್ಟಣದ ಬೆಳಗಿಹಳ್ಳಿ ಎಂಬಲ್ಲಿಂದ ದಸ್ತಗಿರಿ ಮಾಡಿ ಜ.20 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.