ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ಕಾರ್ಯಕಾರಿಣಿ ಸಭೆ
ಸಭೆಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ರವರು, ಇನ್ನು ಮುಂದಿನ ದಿನಗಳಲ್ಲಿ ನಮ್ಮ ಮಂಡಲದಲ್ಲಿ ಹೆಚ್ಚಿನ ಸಂಘಟನಾತ್ಮಕ ಚಟುವಟಿಕೆಗಳು ನಡೆಯಬೇಕು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷವಾದರೂ ಬಿಡಿಗಾಸು ಅನುದಾನ ಬಂದಿಲ್ಲವಾದ ಕಾರಣ, ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಇಂತಹ ಜನ ವಿರೋಧಿ ನೀತಿಗಳು ಕ್ಷೇತ್ರದ ಮನೆ ಮನೆಗೆ ತಲುಪುವಂತಾಗಬೇಕು ಎಂದರು. ಇತ್ತೀಚಿಗೆ ನಿಧನರಾದ ನಿಟ್ಟೆ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಡಾl ಎನ್. ವಿನಯ ಹೆಗ್ಡೆಯವರಿಗೆ ರವಿಶಂಕರ್ ಮಿಜಾರ್ ರವರು ನುಡಿ ನಮನಗಳನ್ನು ಸಲ್ಲಿಸಿದರು.
ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಸಂಸದ ಕ್ಯಾ. ಬ್ರಿಜೇಶ್ ಚೌಟ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪ್ರೇಮಾನಂದ ಶೆಟ್ಟಿ ಹಾಗೂ ಯತೀಶ್ ಆರ್ವರ್, ಜಿಲ್ಲಾ ಕಾರ್ಯದರ್ಶಿ ಪೂರ್ಣಿಮಾ, ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಲಲ್ಲೇಶ್ ಕುಮಾರ್ ಹಾಗೂ ರಮೇಶ್ ಹೆಗ್ಡೆ, ಜಿಲ್ಲಾ ಕೋಶಾಧಿಕಾರಿ ಸಂಜಯ್ ಪ್ರಭು, ಜಿಲ್ಲಾ ಉಪಾಧ್ಯಕ್ಷರಾದ ರಾಕೇಶ್ ರೈ, ಹಿರಿಯರಾದ ಮೋನಪ್ಪ ಭಂಡಾರಿ, ನಿತಿನ್ ಕುಮಾರ್, ಸೇರಿದಂತೆ ನಿಕಟಪೂರ್ವ ಮ.ನ.ಪಾ ಸದಸ್ಯರು, ಮಹಾಶಕ್ತಿ ಕೇಂದ್ರದ ಪದಾಧಿಕಾರಿಗಳು, ಪ್ರಕೋಷ್ಠಗಳ ಪ್ರಮುಖರು, ಶಕ್ತಿಕೇಂದ್ರಗಳ ಅಧ್ಯಕ್ಷರು ಸೇರಿದಂತೆ ಮಂಡಲದ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು. ಮಂಡಲದ ಉಪಾಧ್ಯಕ್ಷರಾದ ಗೌತಮ್ ಸಾಲ್ಯಾನ್ ಸ್ವಾಗತಿಸಿದರೆ, ಮಂಡಲದ ಕಾರ್ಯದರ್ಶಿಗಳಾದ ಸುರೇಖಾ ಹೆಗ್ಡೆಯವರು ಧನ್ಯವಾದವನ್ನಿತ್ತರು.