ಫೇಸ್‌ಬುಕ್‌ನಲ್ಲಿ ಶಾಸಕಿ ಮುರುಳ್ಯ ಅವಹೇಳನ: ಬಿಜೆಪಿ ಆಕ್ರೋಶ
ಬಿಲ್ಲವ ಸಂದೇಶ್ ಎಂಬ ಫೇಸ್‌ಬುಕ್ ಖಾತೆಯಿಂದ ಈ ಪೋಸ್ಟ್ ಮಾಡಲಾಗಿದೆ. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಭಾವಚಿತ್ರ ಬಳಸಿ ಅವರನ್ನು ನಿಂಧಿಸಿ, ಅವಹೇಳನ ಮಾಡುವ ರೀತಿಯಲ್ಲಿ ಪೋಸ್ಟ್ ಮಾಡಲಾಗಿದೆ. ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವ್ಯಾಪಕವಾಗಿ ಖಂಡನೆ ವ್ಯಕ್ತವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಪೋಸ್ಟ್ ನಲ್ಲಿ ’ ದಲಿತ ಸಮುದಾಯದ ಶಾಸಕಿ ಭಾಗೀರಥಿ ಮುರುಳ್ಯ ಶೋಷಣೆಗೊಳಗಾದ ದಲಿತ ಸಮುದಾಯದ ಪರ ನಿಲ್ಲದೆ ಇಂದು ಎಲ್ಲರನ್ನು ಅಗಲಿ ತೆರಳಿದ್ದಾರೆ. ಇವರ ಅಗಲಿಕೆಯ ಶಕ್ತಿ ಬ್ಲೂಜೇಪಿ ಪಕ್ಷದ ಕಾರ್ಯಕರ್ತರಿಗೆ ದೇವರು ನೀಡಲಿ ಎಂದು ಹೇಳುತ್ತಾ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸುತ್ತಿದ್ದೇವೆ ಅಂತ ಪೋಸ್ಟ್ ಹಾಕಲಾಗಿದೆ.
ಸದ್ಯ ಪೋಸ್ಟ್ ವೈರಲ್ ಆಗಿದ್ದು, ಬಿಲ್ಲವ ಸಂದೇಶ್‌ನನ್ನು ಬಂಧಿಸಿ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಬಿಜೆಪಿ ಮುಖಂಡರು, ಸಂಸದರು, ಮಾಜಿ ಸಂಸದರು, ಶಾಸಕರುಗಳು ಆಗ್ರಹಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಬಿಜೆಪಿ ಮಹಿಳಾ ಮೋರ್ಚಾದಿಂದ ಸುಳ್ಯ ಪೋಲೀಸ್ ಠಾಣೆಗೆ ದೂರು ನೀಡಿದ್ದು, ಪೋಸ್ಟ್ ಹಾಕಿದ ಆರೋಪಿಯನ್ನು ಬಂಧಿಸುವಂತೆ ದಕ್ಷಿಣಕನ್ನಡ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗೆ ಕೂಡಾ ಸುಳ್ಯ ಬಿಜೆಪಿ ಮುಖಂಡರು ಮನವಿ ಮಾಡಿದ್ದಾರೆ.