ಮಂಗಳೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ಗೆ ರಾಜ್ಯ ಸರಕಾರದಿಂದ ಜಮೀನು ಮಂಜೂರು
Friday, January 23, 2026
ಮಂಗಳೂರು: ಮಂಗಳೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ಗೆ ರಾಜ್ಯ ಸರಕಾರದಿಂದ ಜಮೀನು ಮಂಜೂರಾಗಿದ್ದು, ಎರಡು ವರ್ಷದೊಳಗೆ ಕನ್ನಡ ಭವನ ನಿರ್ಮಾಣಕ್ಕೆ ಸಿದ್ಧತೆ ಮಾಡಲಾಗುವುದು ಎಂದು ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕು ಘಟಕ ಅಧ್ಯಕ್ಷ ಡಾ. ಮಂಜುನಾಥ್ ರೇವಣ್ಕರ್ ತಿಳಿಸಿದರು.
ಮಂಗಳೂರಿನ ಗುರುಪುರ ಹೋಬಳಿಯ ವಾಮಂಜೂರು ಸಮೀಪದ ತಿರುವೈಲು ಗ್ರಾಮದಲ್ಲಿ 50 ಸೆಂಟ್ಸ್ (ಅರ್ಧ ಎಕರೆ) ಜಾಗವನ್ನು ಕನ್ನಡ ಭವನ ನಿರ್ಮಾಣಕ್ಕಾಗಿ ಸರಕಾರ ಮಂಜೂರು ಮಾಡಿದ್ದು, ಅಧಿಕೃತ ಆದೇಶವನ್ನುನೀಡಲಾಗಿದೆ. ಈ ಜಾಗದಲ್ಲಿ ಶೀಘ್ರದಲ್ಲಿಯೇ ಕನ್ನಡ ಭವನವನ್ನು ನಿರ್ಮಾಣ ಮಾಡಲಾಗುವುದು ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅವರು ತಿಳಿಸಿದರು.
ದ.ಕ.ಜಿಲ್ಲಾ ಕಸಾಪ ಅಧ್ಯಕ್ಷ ಡಾ. ಎಂ.ಪಿ.ಶ್ರೀನಾಥ್, ಕಸಾಪ ಮಾಜಿ ರಾಜ್ಯಾಧ್ಯಕ್ಷ ಡಾ. ಹರಿಕೃಷ್ಣ ಪುನರೂರು, ಮಂಗಳೂರು ತಾಲೂಕು ಘಟಕದ ಗೌರವ ಕಾರ್ಯದರ್ಶಿ ಡಾ. ಮುರಳಿ ಮೋಹನ್ ಚೂಂತಾರು, ಕಾರ್ಯದರ್ಶಿ ಸುಬ್ರಾಯ ಭಟ್, ಅರುಣಾ ನಾಗರಾಜ್, ಸನತ್ ಕುಮಾರ್ ಜೈನ್ ಉಪಸ್ಥಿತರಿದ್ದರು.