ಗಾಂಜಾ ಮಾರಾಟ ಮಾಡುತ್ತಿದ್ದ ಅಂತಾರಾಜ್ಯ ಆರೋಪಿಗಳ ಬಂಧನ
Sunday, January 4, 2026
ಮಂಗಳೂರು: ಮಾದಕ ವಸ್ತು ಗಾಂಜಾವನ್ನು ಬಿಹಾರ ರಾಜ್ಯದಿಂದ ರೈಲು ಮೂಲಕ ಮಂಗಳೂರಿಗೆ ತಂದು ಮಾರಾಟ ಮಾಡಲು ಯತ್ನಿಸಿದ ಅಂತಾರಾಜ್ಯ ಆರೋಪಿತರನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಸುರತ್ಕಲ್‌ನ ಕೃಷ್ಣಪುರ ನಿವಾಸಿಗಳಾದ ಸುನಿಲ್ ಕುಮಾರ್ (40), ಬ್ರಿಜೇಶ್ ಶ್ರೀವಸ್ತವ (42) ಎಂದು ಗುರುತಿಸಲಾಗಿದೆ.
ಘಟನೆಯ ವಿವರ:
ಜ.3 ರಂದು ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಶಾಂತಿಗುಡ್ಡೆ ಕ್ರಾಸ್ ಬಳಿ ರಸ್ತೆಯ ಬದಿಯಲ್ಲಿ ಸುಮಾರು 1 Kg ತೂಕದ ಮಾದಕವಸ್ತು ಗಾಂಜಾವನ್ನು ವಶದಲ್ಲಿರಿಸಿಕೊಂಡು ಅಕ್ರಮವಾಗಿ ಮಾರಾಟ ಮಾಡಲೆತ್ನಿಸಿದ ಆರೋಪಿಗಳನ್ನು ಬಂಧಿಸಿ ಸುಮಾರು 1 ಕೆ.ಜಿ. ಮಾದಕ ವಸ್ತು ಗಾಂಜಾವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.
ಆರೋಪಿತರನ್ನು ವಿಚಾರಣೆ ನಡೆಸಿದಾಗ ಮಾದಕ ವಸ್ತು ಗಾಂಜಾವನ್ನು ಬಿಹಾರ ರಾಜ್ಯದಲ್ಲಿ ಖರಿಧಿಸಿ ರೈಲಿನಲ್ಲಿ ಮಂಗಳೂರಿಗೆ ತಂದು ಉತ್ತರ ಭಾರತದ ಕೂಲಿ ಕಾರ್ಮಿಕರಿಗೆ ಮಾರಾಟ ಮಾಡುತ್ತಿರುವುದಾಗಿ ತಿಳಿಸಿರುತ್ತಾರೆ.
ಈ ಬಗ್ಗೆ ಬಜಪೆ ಪೊಲೀಸರು ಮೊ.ನಂ 08-2026 ಕಲಂ (c), 20(b)(ii)(a) NDPS Act ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.