ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಕಾವ್ಯಶ್ರೀ ಅಜೀರು ಆಯ್ಕೆ: ಉಮೇಶ್ ಮಿಜಾರ್‌ಗೆ ಕಲಾಭೂಷಣ ಪ್ರಶಸ್ತಿ
ಶ್ರೀಕುಂದೇಶ್ವರ ದೇಗುಲದ ಧರ್ಮದರ್ಶಿಯಾಗಿ, ಯಕ್ಷಗಾನ ಮೇಳ ಸಂಘಟಕ, ಕಲಾವಿದ, ಅರ್ಥಧಾರಿಯಾಗಿದ್ದ ದಿ.ರಾಘವೇಂದ್ರ ಭಟ್ ಸ್ಮರಣಾರ್ಥ, ಕ್ಷೇತ್ರದ ವತಿಯಿಂದ ಪ್ರಶಸ್ತಿ ನೀಡಲಾಗುತ್ತಿದೆ. ಜ.23ರಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಆಯ್ಕೆ ಸಮಿತಿ ಸಂಚಾಲಕ ಜಿತೇಂದ್ರ ಕುಂದೇಶ್ವರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಶ್ರೀ ಕುಂದೇಶ್ವರ ಕ್ಷೇತ್ರದಲ್ಲಿ ಜನವರಿ 21ರಿಂದ 23ರವರೆಗೆ ವರ್ಷಾವಧಿ ಜಾತ್ರೆ ನಡೆಯಲಿದ್ದು, ಜ.23ರಂದು ರಾತ್ರಿ 7 ಗಂಟೆಯಿಂದ ರಾಮಚಂದ್ರ ಭಟ್ ಎಲ್ಲೂರು ನಿರ್ದೇಶನದಲ್ಲಿ ಕದ್ರಿ ಮಹಿಳಾ ಯಕ್ಷಕೂಟ ದವರಿಂದ ಮಹಿಳಾ ಯಕ್ಷಗಾನ, ನಮ್ಮ ಬೆದ್ರ ತಂಡದವರಿಂದ ತುಳು ನಾಟಕ ನಡೆಯಲಿದೆ. ಇದೇ ಸಂದರ್ಭ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು.
ಈ ಹಿಂದೆ ಸಾಲಿಗ್ರಾಮ ಮೇಳದ ಸಂಚಾಲಕ ಕಿಶನ್ ಹೆಗ್ಡೆ, ರಮೇಶ್ ಭಂಡಾರಿ ಪಟ್ಲ ಸತೀಶ್ ಶೆಟ್ಟಿ, ಶಶಿಕಾಂತ್ ಶೆಟ್ಟಿ ಕಾರ್ಕಳ, ರಾಘವೇಂದ್ರ ಮಯ್ಯ, ಕಟೀಲು ಶ್ರೀಹರಿ ನಾರಾಯಣದಾಸ ಆಸ್ರಣ್ಣ, ಲೋಕೇಶ್ ಮಚ್ಚೂರು ಮೊದಲಾದವರಿಗೆ ಕುಂದೇಶ್ವರ ಸಮ್ಮಾನ್ ಪ್ರಶಸ್ತಿ ಪ್ರದಾನ ಮಾಡಲಾಗಿದೆ.
ಕುಂದೇಶ್ವರ ಕಲಾಭೂಷಣ ಪ್ರಶಸ್ತಿ: ರಂಗಭೂಮಿ ಕಲಾವಿದರಿಗೆ ನೀಡಲಾಗುವ ಕುಂದೇಶ್ವರ ಕಲಾಭೂಣ ಭೂಷಣ ಪ್ರಶಸ್ತಿ ಈ ಬಾರಿ ಉಮೇಶ್ ಮಿಜಾರು ಅವರಿಗೆ ಪ್ರಧಾನ ಮಾಡಲಾಗುವುದು. ಸಮಾರಂಭದ ಬಳಿಕ ನಮ್ಮ ಬೆದ್ರ ಕಲಾವಿದರಿಂದ ವೈರಲ್ ವೈಶಾಲಿ ತುಳು ನಾಟಕ ಪ್ರದರ್ಶನಗೊಳ್ಳಲಿದೆ ಎಂದರು.