ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ರಥಬೀದಿ ಕಾಲೇಜಿನ ಮೇಘ ಪ್ರಥಮ
Wednesday, January 21, 2026
ಮಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಮಹಾತ್ಮ ಗಾಂಧೀಜಿಯಯವರ 156ನೇ ಜಯಂತಿ ಅಂಗವಾಗಿ ನಡೆದ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಮಂಗಳೂರಿನ ರಥಬೀದಿ ಡಾ. ಪಿ.ದಯಾನಂದ ಪೈ. ಪಿ.ಸತೀಶ್ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಮೇಘ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.
‘ಮೌಲ್ಯಾಧಾರಿತ ನಾಯಕತ್ವ ಹಾಗೂ ನೈತಿಕ ರಾಜಕಾರಣ- ಯುವಕರಿಗೆ ಗಾಂಧೀಜಿಯವರ ಪಾಠ’ ಎಂಬ ವಿಷಯದಲ್ಲಿ ಪ್ರಬಂಧ ಬರೆದಿದ್ದರು. ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಅವರಿಗೆ 31,000 ರೂ. ನಗದು ಪುರಸ್ಕಾರ ಲಭಿಸಿದೆ ಎಂದು ಜಿಲ್ಲಾ ವಾರ್ತಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.