ಜಿ ರಾಮ್ ಜಿ ಯೋಜನೆಯ ಕುರಿತು ಕಾಂಗ್ರೆಸ್ ಪಕ್ಷ ಅಪಪ್ರಚಾರ ನಡೆಸುತ್ತಿದೆ: ವಿಶ್ವೇಶ್ವರ ಹೆಗಡೆ ಕಾಗೇರಿ ಆರೋಪ

ಜಿ ರಾಮ್ ಜಿ ಯೋಜನೆಯ ಕುರಿತು ಕಾಂಗ್ರೆಸ್ ಪಕ್ಷ ಅಪಪ್ರಚಾರ ನಡೆಸುತ್ತಿದೆ: ವಿಶ್ವೇಶ್ವರ ಹೆಗಡೆ ಕಾಗೇರಿ ಆರೋಪ


ಮಂಗಳೂರು: ಕೇಂದ್ರ ಸರ್ಕಾರದ ಉದ್ಯೋಗ ಖಾತ್ರಿ ಯೋಜನೆಯ ಕುರಿತು ಕಾಂಗ್ರೆಸ್ ಪಕ್ಷ ಅಪಪ್ರಚಾರ ನಡೆಸುತ್ತಿದೆ ಎಂದು ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಆರೋಪಿಸಿದರು.

ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ಇಂದು ಕರೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, 2006ರಿಂದ ಗ್ರಾಮೀಣ ಭಾಗಗಳಲ್ಲಿ ಅಭಿವೃದ್ಧಿಯ ಆದ್ಯತೆಗಳು ಬದಲಾಗಿವೆ. ವಿಕಸಿತ್ ಭಾರತ್ ಯೋಜನೆಯ ಭಾಗವಾಗಿ ಜಾರಿಯಲ್ಲಿರುವ ಜಿ ರಾಮ್ ಜಿ ಉದ್ಯೋಗ ಖಾತ್ರಿ ಯೋಜನೆಯ ಮೂಲಕ ಬಡವರಿಗೆ ಹಿಂದಿನ 100 ದಿನಗಳ ಬದಲಾಗಿ ಈಗ 125 ದಿನಗಳ ಉದ್ಯೋಗಾವಕಾಶ ಒದಗಿಸಲಾಗುತ್ತಿದೆ ಎಂದರು.

ಉದ್ಯೋಗ ಖಾತ್ರಿ ಯೋಜನೆಯ ಅನುಷ್ಠಾನವನ್ನು ಗ್ರಾಮ ಪಂಚಾಯತ್‌ಗಳ ಮೂಲಕ ನಡೆಸಲಾಗುತ್ತಿದ್ದು, ಜಲಸಂರಕ್ಷಣೆ, ಗ್ರಾಮದ ಮೂಲ ಅವಶ್ಯಕತೆಗಳ ಪೂರೈಕೆ ಸೇರಿದಂತೆ ನಾಲ್ಕು ವಿಭಾಗಗಳಲ್ಲಿ ಯೋಜನೆಯನ್ನು ವಿಂಗಡಿಸಲಾಗಿದೆ ಎಂದು ತಿಳಿಸಿದರು.

ಉದ್ಯೋಗ ಖಾತ್ರಿ ಯೋಜನೆಯಲ್ಲಿ ದೇಶಾದ್ಯಂತ ಭಾರೀ ಪ್ರಮಾಣದ ನಡೆದಿದೆ. ಕರ್ನಾಟಕದಲ್ಲೂ ನಡೆದಿರುವ ಭ್ರಷ್ಟಾಚಾರದ ಕುರಿತು ಸಮರ್ಪಕ ತನಿಖೆ ನಡೆದಿಲ್ಲ. ಈ ಹಿನ್ನೆಲೆಯಲ್ಲಿ ಹೊಸ ಕಾಯ್ದೆಯ ಮೂಲಕ ಯೋಜನೆಯನ್ನು ಪಾರದರ್ಶಕವಾಗಿ ಅನುಷ್ಠಾನಗೊಳಿಸಲಾಗುತ್ತದೆ ಎಂದು ಹೇಳಿದರು.

ಕೇಂದ್ರ ಸರ್ಕಾರದ ಅನೇಕ ಜನಪರ ಯೋಜನೆಗಳು ಜನರಿಗೆ ತಲುಪದಂತೆ ಕಾಂಗ್ರೆಸ್ ಅಡ್ಡಿಪಡಿಸಿದೆ ಎಂದು ಆರೋಪಿಸಿದ ಅವರು, ಕಾಂಗ್ರೆಸ್‌ಗೆ ಬಡತನ ನಿರ್ಮೂಲನೆ ಮಾಡುವ ನಿಜವಾದ ವಿಚ್ಛಾಶಕ್ತಿ ಇಲ್ಲ. ಹೀಗಾಗಿ ಉದ್ಯೋಗ ಖಾತ್ರಿ ಯೋಜನೆಯ ವಿರುದ್ಧ ಅಪಪ್ರಚಾರ ನಡೆಸುತ್ತಿದ್ದಾರೆ. ಇದು ಕಾಂಗ್ರೆಸ್‌ನ ಹತಾಶೆಯ ಪ್ರತಿಫಲ ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕ ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ಮಾಜಿ ವಿಧಾನ ಪರಿಷತ್ ಸದಸ್ಯ ಕ್ಯಾ. ಗಣೇಶ್ ಕಾರ್ಣಿಕ್, ಪ್ರೇಮಾನಂದ ಶೆಟ್ಟಿ, ವಸಂತ ಪೂಜಾರಿ ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article