ರಥಬೀದಿ ಕಾಲೇಜಿನಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ
Friday, January 23, 2026
ಮಂಗಳೂರು: ಇಲ್ಲಿನ ರಥಬೀದಿಯ ಡಾ. ಪಿ. ದಯಾನಂದ ಪೈ-ಪಿ. ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕರ್ನಾಟಕ ಸರ್ಕಾರದ ಆದೇಶದ ಅನುಸಾರ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಜ.23 ರಂದು ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ. ಜಯಕರ ಭಂಡಾರಿ ಎಂ. ಅವರು ವಹಿಸಿ, ನೂರು ಶೇಕಡಾ ಮತದಾನವಾದಾಗ ಮಾತ್ರ ಭಾರತದ ಪ್ರಜಾಪ್ರಭುತ್ವ ಯಶಸ್ವಿ ಪ್ರಜಾಪ್ರಭುತ್ವವಾಗಲು ಸಾಧ್ಯ ಎಂದು ಹೇಳಿದರು.
ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ನಸೀಮಾ ಬೇಗಂ ಎಸ್. ಅವರು ವಿದ್ಯಾರ್ಥಿಗಳಿಗೆ ಮತದಾರರ ದಿನಾಚರಣೆಯ ಪ್ರತಿಜ್ಞಾವಿಧಿ ಬೋಧಿಸಿದರು.
ಮತದಾರ ಕ್ಲಬ್‌ನ ಸಂಯೋಜಕಿ ವತ್ಸಲಾ ಪಿ. ಅವರು ಮತದಾರ ದಿನಾಚರಣೆಯ ಮಹತ್ವವನ್ನು ವಿವರಿಸಿ, ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿಗಳು, ಮಂಗಳೂರು ವಿಶ್ವವಿದ್ಯಾನಿಲಯದ ಮೌಲ್ಯಮಾಪಕ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.