ಸಂದೇಶ ಪ್ರಶಸ್ತಿ ಪ್ರಕಟ: ಮೊಗಸಾಲೆ, ಇಂದಿರಾ ಹೆಗ್ಗಡೆ, ತುಂಗ ರೇಣುಕಗೆ ಪ್ರಶಸ್ತಿ

ಸಂದೇಶ ಪ್ರಶಸ್ತಿ ಪ್ರಕಟ: ಮೊಗಸಾಲೆ, ಇಂದಿರಾ ಹೆಗ್ಗಡೆ, ತುಂಗ ರೇಣುಕಗೆ ಪ್ರಶಸ್ತಿ

ಮಂಗಳೂರು: ಡಾ. ನಾ. ಮೊಗಸಾಲೆ, ಡಾ. ಇಂದಿರಾ ಹೆಗ್ಗಡೆ ಸೇರಿದಂತೆ ಏಳು ಮಂದಿ ಸಾಧಕರು ಹಾಗೂ ಒಂದು ಸಂಸ್ಥೆಗೆ 2026ನೇ ಸಾಲಿನ ಮಂಗಳೂರಿನ ಸಂದೇಶ ಸಂಸ್ಕೃ ತಿ ಮತ್ತು ಶಿಕ್ಷಣ ಪ್ರತಿಷ್ಠಾನ ನೀಡುವ ’ಸಂದೇಶ ಪ್ರಶಸ್ತಿ’ ಪ್ರಕಟಿಸಲಾಗಿದೆ.

ಸಂದೇಶ ಕನ್ನಡ ಸಾಹಿತ್ಯ ಪ್ರಶಸ್ತಿಗೆ ಕಾಂತಾವರ ಕನ್ನಡ ಸಂಘದ ರೂವಾರಿ, ಹಿರಿಯ ಸಾಹಿತಿ ಡಾ. ನಾ. ಮೊಗಸಾಲೆ, ಸಂದೇಶ ಕೊಂಕಣಿ ಸಾಹಿತ್ಯ ಪ್ರಶಸ್ತಿಗೆ ಕೊಂಕಣಿ ಸಾಹಿತಿ ಪ್ಯಾಟ್ರಿಕ್ ಕಾಮಿಲ್ ಮೋರಾಸ್, ಸಂದೇಶ ತುಳು ಸಾಹಿತ್ಯ ಪ್ರಶಸ್ತಿಗೆ ಸಾಹಿತಿ, ಸಂಶೋಧಕಿ ಡಾ. ಇಂದಿರಾ ಹೆಗ್ಗಡೆ, ಸಂದೇಶ ಮಾಧ್ಯಮ ಪ್ರಶಸ್ತಿಗೆ ಹಿರಿಯ ಪತ್ರಕರ್ತೆ ತುಂಗ ರೇಣುಕ, ಸಂದೇಶ ಕೊಂಕಣಿ ಸಂಗೀತ ಪ್ರಶಸ್ತಿಗೆ ಸಂಗೀತ ಕ್ಷೇತ್ರದ ಸಾಧಕ ಸೈಮನ್ ಪಾಯ್ಸ್ ಸಂದೇಶ ಕಲಾ ಪ್ರಶಸ್ತಿಗೆ ಹಿರಿಯ ರಂಗಕರ್ಮಿ ಶ್ರೀನಿವಾಸ ಜಿ. ಕಪ್ಪಣ್ಣ, ಸಂದೇಶ ಶಿಕ್ಷಣ ಪ್ರಶಸ್ತಿಗೆ ಗೊಂಬೆಯಾಟದ ಮೂಲಕ ಪ್ರಸಿದ್ಧಿ ಪಡೆದ ಡಾ. ದತ್ತಾತ್ರೇಯ ಅರಳಿಕಟ್ಟೆ ಹಾಗೂ ಸಂದೇಶ ವಿಶೇಷ ಪ್ರಶಸ್ತಿಗೆ ಬಳ್ಳಾರಿಯ ನವಜೀವನ ರಿಹ್ಯಾಬಿಲಿಟೇಶನ್ ಸೆಂಟರ್ ಫಾರ್ ಡಿಸೇಬಲ್ಡ್ ಸಂಸ್ಥೆಯನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರಶಸ್ತಿ ಆಯ್ಕೆ ಸಮಿತಿ ಸದಸ್ಯೆ ಕನ್ಸೆಪ್ಟ ಫೆರ್ನಾಂಡಿಸ್ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. 

ಸಂದೇಶ ಪ್ರತಿಷ್ಠಾನ ಟ್ರಸ್ಟಿ ರಾಯ್ ಕ್ಯಾಸ್ಟಲಿನೊ ಮಾತನಾಡಿ, ಜ.21ರಂದು ಸಂಜೆ 5.30ಕ್ಕೆ ನಗರದ ನಂತೂರು ಸಂದೇಶ ಪ್ರತಿಷ್ಠಾನದ ಆವರಣದಲ್ಲಿ 55ನೇ ವರ್ಷದ ಸಂದೇಶ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಸಂಸ್ಥೆಯ ಅಧ್ಯಕ್ಷರಾದ ಬಳ್ಳಾರಿ ಬಿಷಪ್ ಅವಂ. ಡಾ. ಹೆನ್ರಿ ಡಿಸೋಜ ಅಧ್ಯಕ್ಷತೆ ವಹಿಸುವರು. ನಟ, ನಿರ್ದೇಶಕ ಡಾ. ನಾಗತಿಹಳ್ಳಿ ಚಂದ್ರಶೇಖರ್ ಮುಖ್ಯ ಅತಿಥಿಯಾಗಿ ಭಾಗವಹಿಸುವರು. 

ಶಾಸಕರಾದ ಡಿ. ವೇದವ್ಯಾಸ ಕಾಮತ್, ಐವನ್ ಡಿಸೋಜ, ಮಂಗಳೂರು ಬಿಷಪ್ ಅವಂ. ಡಾ. ಪೀಟರ್ ಪೌಲ್ ಸಲ್ದಾನಾ, ಉಡುಪಿ ಬಿಷಪ್ ಜೆರಾಲ್ಡ್ ಐಸಾಕ್ ಲೋಬೊ, ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷತಾರಾನಾಥ ಗಟ್ಟಿ ಕಾಪಿಕಾಡ್, ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಜೋಕಿಂ ಸ್ಥಾನಿ ಅಲ್ವಾರಿಸ್, ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮರ್ ಯು.ಎಚ್., ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಅಧ್ಯಕ್ಷೆಶಾಲೆಟ್ ಲವಿನಾ ಪಿಂಟೊ, ಕಸಾಪ ದ.ಕ. ಜಿಲ್ಲಾಧ್ಯಕ್ಷಡಾ. ಎಂ.ಪಿ. ಶ್ರೀನಾಥ, ಗಣ್ಯರು ಭಾಗವಹಿಸುವರು ಎಂದರು. 

ಸಂದೇಶ ಪ್ರತಿಷ್ಠಾನ ನಿರ್ದೇಶಕ ಫಾ. ಸುದೀಪ್ ಪೌಲ್, ಪ್ರಶಸ್ತಿ ಆಯ್ಕೆ ಸಮಿತಿ ಸದಸ್ಯರಾದ ರೂಪಕಲಾ ಆಳ್ವ, ಬಿ.ಎ. ಮೊಹಮ್ಮದ್ ಹನೀಫ್ ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article