ಜ.21 ರಂದು ನೂತನ ದೇವಸ್ಥಾನಕ್ಕೆ ಶಿಲಾನ್ಯಾಸ
Wednesday, January 14, 2026
ಮೂಡುಬಿದಿರೆ: ಶ್ರೀ ಸತ್ಯನಾರಾಯಣ ದೇವಸ್ಥಾನ ಶ್ರೀ ಕ್ಷೇತ್ರ ಸತ್ಯಪುರ ಬೋರುಗುಡ್ಡೆಯಲ್ಲಿ ಜ.21 ರಂದು ನೂತನ ದೇವಸ್ಥಾನಕ್ಕೆ ಶಿಲಾನ್ಯಾಸ ನಡೆಯಲಿದೆ.
ಬೆಳಗ್ಗೆ 9.25ಕ್ಕೆ ಶಿಲಾನ್ಯಾಸ ಕಾರ್ಯಕ್ರಮ ನಡೆಯಲಿದೆ. ಬಳಿಕ ಧಾರ್ಮಿಕ ಸಭೆ ನಡೆಯಲಿದ್ದು, ಶ್ರೀ ಕ್ಷೇತ್ರ ಇಟಲ ದೇವಸ್ಥಾನದ ಆಡಳಿತ ಮೋಕ್ತೇಸರರಾದ ಬಿ. ವಿಮಲ್ ಕುಮಾರ್ ಶೆಟ್ಟಿ, ಪಣಪಿಲ ಅರಮನೆ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಶ್ರೀ ಕ್ಷೇತ್ರ ಕಟೀಲು ಅನುವಂಶಿಕ ಮೋಕ್ತೇಸರರು ವೇ.ಮೂ. ಲಕ್ಷ್ಮೀನಾರಾಯಣ ಅಸ್ರಣ್ಣರು ಆಶೀರ್ವಚನ ನೀಡಲಿದ್ದಾರೆ. ಮುಖ್ಯ ಅತಿಥಿಗಾಳಾಗಿ ಮುಂಬೈ ಕೆ. ಕೃಷ್ಣರಾಜ ತಂತ್ರಿ, ದ.ಕ. ಲೋಕಸಭಾ ಸದಸ್ಯ ಕ್ಯಾ. ಬ್ರಿಜೇಷ್ ಚೌಟ, ಮೂಲ್ಕಿ-ಮೂಡುಬಿದಿರೆ ಶಾಸಕ, ಶ್ರೀ ಕ್ಷೇತ್ರ ಸತ್ಯಪುರ ಬೋರುಗುಡ್ಡೆಯ ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷ ಉಮಾನಾಥ ಎ. ಕೋಟ್ಯಾನ್ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ವಿಶ್ವನಾಥ್ ಹನ್ನೇರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.