ನಾಳೆ ಮೂಡುಬಿದಿರೆಯಲ್ಲಿ 23ನೇ ವಷ೯ದ ಕೋಟಿ-ಚೆನ್ನಯ ಜೋಡುಕರೆ ಕಂಬಳ: ಎಂಜಿಆರ್ ಗ್ರೂಪ್ ನ ಅಧ್ಯಕ್ಷ ಕೆ. ಪ್ರಕಾಶ್ ಶೆಟ್ಟಿಗೆ ವೀರ ರಾಣಿ ಅಬ್ಬಕ್ಕ 500ರ ಸಂಭ್ರಮ ಪ್ರಶಸ್ತಿ
ಪೂರ್ವಾಹ್ನ ಮೂಡುಬಿದಿರೆ ಚೌಟರ ಅರಮನೆ ಕುಲದೀಪ ಎಂ. ರವರ ಅಧ್ಯಕ್ಷತೆಯಲ್ಲಿ ನಡೆಯುವ ಕಂಬಳೋತ್ಸವವನ್ನು ಅಲಂಗಾರು ದೇವಸ್ಥಾನದ ಆಡಳಿತ ಮೊಕೇಸರರಾದ ವೇ.ಮೂ. ಈಶ್ವರ ಭಟ್, ಅಲಂಗಾರು ಚರ್ಚ್‌ನ ಧರ್ಮಗುರು ವಂ. ಫಾ. ಮೆಲ್ವಿನ್ ನೊರೊನ್ಹಾ, ಪುತ್ತಿಗೆ ನೂರಾನಿ ಮಸ್ಜೀದ್‌ನ ಮೌಲಾನಾ ಝೀಯಾವುಲ್ಲಾ ಹಕ್, ಕುಂಟಾಡಿ ಸುಧೀರ್ ಹೆಗ್ಡೆಯವರು ಉದ್ಘಾಟಿಸಲಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಸಭಾ ವೇದಿಕೆಯನ್ನು ಉದ್ಘಾಟಿಸಲಿದ್ದು, ಆಧ್ಯಾತ್ಮಿಕ ಗುರು, ಅಂತರಾಷ್ಟ್ರೀಯ ವಾಸ್ತು ತಜ್ಞ ಚಂದ್ರಶೇಖರ, ಸ್ವಾಮೀಜಿ ದೀಪ ಪ್ರಜ್ವಲನೆಗೈಯಲಿದ್ದಾರೆ. ರಾಣಿ ಅಬ್ಬಕ್ಕ ದೇವಿಯ ಕುರಿತು ಖ್ಯಾತ ವಾಗಿ ಶ್ರೀಕಾಂತ್ ಶೆಟ್ಟಿ ಉಪನ್ಯಾಸ ನೀಡಲಿದ್ದಾರೆ. ಜವನೆರ್ ಬೆದ್ರ ಫೌಂಡೇಶನ್ ಸಂಸ್ಥಾಪಕ ಅಮರ್ ಕೋಟೆಗೆ ಸನ್ಮಾನ ನಡೆಯಲಿದೆ.
ಸಾಯಂಕಾಲ 5 ಗಂಟೆಗೆ ಫೆಬಿಯನ್ ಕೊಲಾಸೋ ವೇದಿಕೆಯಲ್ಲಿ ನಡೆಯುವ ಸಭಾ ಕಾರ್ಯಕ್ರಮವನ್ನು ಆಂಧ್ರ ಪ್ರದೇಶ ಘನತೆವೆತ್ತ ರಾಜ್ಯಪಾಲರು ಹಾಗೂ ನಿವೃತ್ತ ಸುಪ್ರೀಮ್ ಕೋರ್ಟ್ ನ್ಯಾಯಾಧೀಶರು ನ್ಯಾ.ಮೂ. ಅಬ್ದುಲ್ ನಝೀರ್ ನೆರವೇರಿಸಲಿದ್ದಾರೆ. ಕಂಬಳ ಸಮಿತಿಯ ಅಧ್ಯಕ್ಷ ಶಾಸಕ ಉಮಾನಾಥ ಎ. ಕೋಟ್ಯಾನ್ ಅಧ್ಯಕ್ಷತೆ ವಹಿಸಲಿದ್ದು ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ಖಾತೆಗಳ ರಾಜ್ಯ ಸಚಿವ ವಿ. ಸೋಮಣ್ಣ, ದ.ಕ. ಜಿಲ್ಲಾ ಸಂಸದ ಕ್ಯಾ. ಬ್ರಿಜೇಶ್ ಚೌಟ, ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಹಾಗೂ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡುರಾವ್ ಗೌರವ ಉಪಸ್ಥಿತಿ ಹೊಂದಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ವಿ. ಸುನಿಲ್ ಕುಮಾರ್, ರಾಜೇಶ್ ನ್ಯಾಕ್, ಡಾ. ವೈ. ಭರತ್ ಶೆಟ್ಟಿ, ಡಿ. ವೇದವ್ಯಾಸ ಕಾಮತ್, ಹರೀಶ್ ಪೂಂಜ, ಅಶೋಕ್ ಕುಮಾರ್ ರೈ, ಭಾಗೀರತಿ ಮುರುಳ್ಯ, ಯಶ್‌ಪಾಲ್ ಸುವರ್ಣ, ಸುರೇಶ್ ಶೆಟ್ಟಿ ಗುರ್ಮೆ, ಗುರುರಾಜ್ ಗಂಟಿಹೊಳೆ, ಕಿರಣ್ ಕುಮಾರ್ ಕೊಡ್ಲಿ, ವಿಧಾನ ಪರಿಷತ್ ಸದಸ್ಯರಾದ ಡಾ. ಧನಂಜಯ ಸರ್ಜಿ, ಕಿಶೋರ್ ಕುಮಾರ್ ಪುತ್ತೂರು, ಪ್ರತಾಪಸಿಂಹ ನಾಯಕ್, ಐವನ್ ಡಿಸೋಜಾ, ಎಸ್.ಎಲ್. ಭೋಜೆಗೌಡ, ಮಂಜುನಾಥ ಭಂಡಾರಿ, ಮಾಜಿ ಸಚಿವ ರಾದ ಕೆ. ಅಭಯಚಂದ್ರ ಜೈನ್, ಕೃಷ್ಣ ಜೆ. ಪಾಲೇಮಾರ್ ಭಾಗವಹಿಸಲಿದ್ದಾರೆ.
ಅನಿವಾಸಿ ಉದ್ಯಮಿ ರೊನಾಲ್ಡ್ ಕೊಲಾಸೊ, ಮಾಜಿ ಶಾಸಕರುಗಳು, ವಿಧಾನಪರಿಷತ್ ಸದಸ್ಯರುಗಳು, ಆಳ್ವಾಸ್ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಸುದರ್ಶನ ಎಂ., ಸೇರಿದಂತೆ ಹಲವಾರು ಗಣ್ಯರು ಈ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ಫೆ. 01ರಂದು ಪೂರ್ವಾಹ್ನ ಮೂಡುಬಿದಿರೆ ಉಪವಿಭಾಗ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪಿ. ಶ್ರೀಧರ್ ಅಧ್ಯಕ್ಷತೆಯಲ್ಲಿ ತಹಶೀಲ್ದಾರ್ ಶ್ರೀಧರ ಎಸ್. ಮುಂದಲಮನಿ, ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ., ವಲಯ ಅರಣ್ಯಾಧಿಕಾರಿ ಕಿರಣ್ ಕುಮಾರ್ ಜಿ., ಹಾಗೂ ಇಲಾಖಾಧಿ ಕಾರಿಗಳ ಡ, ಸಮಕ್ಷಮದಲ್ಲಿ ಬಹುಮಾನ ವಿತರಣಾ ಸಮಾರಂಭ ನಡೆಯಲಿದೆ.
ಗೌರವ ಸನ್ಮಾನ: ಜಿಲ್ಲೆಯಲ್ಲಿ ನಡೆಯುವ ಪ್ರತಿಷ್ಠಿತ 23ನೇ ವರ್ಷದ ಮೂಡುಬಿದಿರೆಯ ಕೋಟಿ-ಚೆನ್ನಯ ಜೋಡುಕರೆ ಕಂಬಳದಲ್ಲಿ ಪ್ರತಿ ವರ್ಷವೂ ಸಾಧಕ ಗಣ್ಯರನ್ನು ಸನ್ಮಾನಿಸುವ ಸಂಪ್ರದಾಯವಿದೆ. ನೂತನ ಕರೆ ನಿರ್ಮಾಣದ ಗೌರವ ಎಂಬಂತೆ ಕರೆ ನಿರ್ಮಾಣಕಾರ ಜೋನ್ ಸಿರಿಲ್ ಡಿಸೋಜಾ ಸರಪ್ಪಾಡಿ, ಶ್ರೀನಿವಾಸ ಗೌರ ಮಿಜಾರು ಅಶ್ವತ್ಥಪುರ, ಕಂಬಳ ಓಟಗಾರ ರಾಜೇಶ್ ಮಾರ್ನಾಡ್ ರನ್ನು ಗುರುತಿಸಲಾಗುವುದು ಎಂದು ತಿಳಿಸಿದರು.
ಕಂಬಳ ಸಮಿತಿಯ ಕೋಶಾಧ್ಯಕ್ಷ ಕೊಳಕೆ ಇವ೯ತ್ತೂರು ಭಾಸ್ಕರ್ ಎಸ್. ಕೋಟ್ಯಾನ್, ಕಾಯ೯ದಶಿ೯ ರಂಜಿತ್ ಪೂಜಾರಿ, ಬಿಜೆಪಿ ಮಂಡಲ ಅಧ್ಯಕ್ಷ ದಿನೇಶ್ ಪುತ್ರನ್, ಪ್ರಧಾನ ಕಾಯ೯ದಶಿ೯ ಹರಿಪ್ರಸಾದ್ ಶೆಟ್ಟಿ, ಕಂಬಳ ಸಮಿತಿಯ ಉಪಾಧ್ಯಕ್ಷರಾದ ಸುರೇಶ್ ಕೆ. ಪೂಜಾರಿ ಮತ್ತು ಶಾಂತಿಪ್ರಸಾದ್ ಹೆಗ್ಡೆ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ಎಂ.ಆರ್.ಜಿ ಗ್ರೂಪ್ ನ ಅಧ್ಯಕ್ಷ ಕೆ. ಪ್ರಕಾಶ್ ಶೆಟ್ಟಿ ಅವರಿಗೆ 23ನೇ ವಷ೯ದ ಪ್ರತಿಷ್ಠಿತ ಮೂಡುಬಿದಿರೆ ಕೋಟಿ-ಚೆನ್ನಯ ಜೋಡುಕರೆ ಕಂಬಳದ ರಾಜ್ಯಮಟ್ಟದ ವೀರ ರಾಣಿ ಅಬ್ಬಕ್ಕ 500 ಸಂಭ್ರಮದ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು.
ಕಂಬಳಕ್ಕೆ ನಟ ತರುಣ್ ಸುಧೀರ್ ಹಾಗೂ ನಟಿ ಸೋನಲ್ ಮೊಂತೆರೋ
*ವಿಶೇಷ ಗೌರವ ಅತಿಥಿಗಳಾಗಿ ಚಲನಚಿತ್ರ ನಿರ್ದೇಶಕ ಮತ್ತು ನಟ ತರುಣ್ ಸುಧೀರ್ ಹಾಗೂ ನಟಿ ಸೋನಲ್ ಮೊಂತೆರೋ ಭಾಗವಹಿಸಲಿದ್ದಾರೆ.