ಶ್ರೀ ಮಹಾವೀರ ಕಾಲೇಜಿನಲ್ಲಿ ಗಣರಾಜ್ಯೋತ್ಸ ಆಚರಣೆ
ಬಳಿಕ ಅವರು ಗಣರಾಜ್ಯೋತ್ಸವದ ಸಂದೇಶ ಸಾರುತ್ತಾ, “ಜನವರಿ 26, 1950ರಂದು ನಮ್ಮ ಭಾರತ ದೇಶವು ತನ್ನದೇ ಸಂವಿಧಾನವನ್ನು ಜಾರಿಗೊಳಿಸಿಕೊಂಡು ಗಣರಾಜ್ಯವಾಗಿ ಘೋಷಿತವಾಯಿತು. ಈ ದಿನವು ಕೇವಲ ಆಚರಣೆಯ ದಿನವಲ್ಲ, ಇದು ನಮ್ಮ ಹಕ್ಕು, ಕರ್ತವ್ಯ ಮತ್ತು ಮೌಲ್ಯಗಳನ್ನು ನೆನಪಿಸುವ ದಿನವಾಗಿದೆ.ನಮ್ಮ ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೂ ಸಮಾನತೆ, ಸ್ವಾತಂತ್ರ್ಯ ಮತ್ತು ನ್ಯಾಯವನ್ನು ನೀಡುತ್ತದೆ.ಯುವ ಪೀಳಿಗೆ ಆಗಿರುವ ನೀವು ದೇಶದ ಭವಿಷ್ಯ, ನೀವು ಶಿಕ್ಷಣದಲ್ಲಿ ಮಾತ್ರವಲ್ಲ ನೈತಿಕತೆ, ಶಿಸ್ತು, ದೇಶಪ್ರೇಮ ಮತ್ತು ಸಾಮಾಜಿಕ ಜವಾಬ್ದಾರಿಗಳಲ್ಲಿಯೂ ಮುಂದಿರಬೇಕು. ದೇಶ ನಮಗಾಗಿ ಏನು ನೀಡಿದೆ ಎಂಬುವುದಕ್ಕಿಂತ ನಾವು ದೇಶಕ್ಕೇನು ನೀಡಿದ್ದೇವೆ ಎಂಬುವುದ್ದನು ಆಲೋಚಿಸಿ ದೇಶದ ಪ್ರಗತಿಗೆ ಸಹಕರಿಸಬೇಕು” ಎಂಬುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಕಾಲೇಜು ಆಡಳಿತ ಮಂಡಳಿಯ ಉಪಾಧ್ಯಕ್ಷ ಸಂಪತ್ ಸಾಮ್ರಾಜ್ಯ, ವಿಶ್ವಸ್ಥ ಮಂಡಳಿಯ ಕೋಶಾಧಿಕಾರಿ ರಾಮ್‌ಪ್ರಸಾದ್ ಭಟ್, ಮಹಾವೀರ ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ರಾಧಾಕೃಷ್ಣ, ವಿಶ್ವಸ್ಥ ಮಂಡಳಿಯ ಸದಸ್ಯರಾದ ಜೆ.ಜೆ. ಪಿಂಟೋ, ಪ್ರೊ. ರಮೇಶ್ ಭಟ್, ಎಸ್‌ಎನ್‌ಎಂ ಪೊಲಿಟೆಕ್ನಿಕ್ ಪ್ರಾಂಶುಪಾಲೆ ತರೀನಾ, ಎ.ಜಿ ಸೋನ್ಸ್ ಐಟಿಐ ಪ್ರಾಂಶುಪಾಲ ಶ್ರೀಕಾಂತ್ ಹೊಳ್ಳ , ಎಂ.ಕೆ.ಅನಂತ್ರಾಜ್ ದೈಹಿಕ ಶಿಕ್ಷಣ ಕಾಲೇಜಿನ ಪ್ರಾಂಶುಪಾಲ ಧನಂಜಯ ಶೆಟ್ಟಿ ಮತ್ತು ಈ ಎಲ್ಲಾ ಸಂಸ್ಥೆಗಳ ಅಧ್ಯಾಪಕರು, ಅಧ್ಯಾಪಕೇತರರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.
ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಹಾಗೂ ಎನ್‌ಸಿಸಿ ಅಧಿಕಾರಿ ಲೆಫ್ಟಿನೆಂಟ್ ವಿಜಯಲಕ್ಷ್ಮಿ ಸ್ವಾಗತಿಸಿ, ನಿರೂಪಿಸಿದರು.