ನಶಾಮುಕ್ತ ಭಾರತ: ಬೃಹತ್ ವಾಕಥಾನ್-ಅಂಗಾಂಗ ದಾನ-ವ್ಯಸನ ಮುಕ್ತ ಸಂದೇಶ ಸಾರಿದ ಯುವಜನತೆ
ದುಶ್ಚಟಗಳಿಂದ ಯುವಜನತೆ ರಕ್ಷಣೆ-ನಮ್ಮ ಹೊಣೆ: ಡಾ. ಭಗವಾನ್
ರಾಣಿ ಅಬ್ಬಕ್ಕ ಪ್ರತಿಮೆಗೆ ಮಾಲಾರ್ಪಣೆಯೊಂದಿಗೆ ಕಾರ್ಯಕ್ರಮ ಆರಂಭಿಸಲಾಯಿತು. ಬಳಿಕ ರಾಷ್ಟ್ರಗೀತೆ ಹಾಡಲಾಯಿತು. ಅನಂತರ ಚೌಟರ ಅರಮನೆಯ ರಾಣಿ ಅಬ್ಬಕ್ಕ ಪ್ರತಿಮೆಯ ವೃತ್ತದಿಂದ ಸ್ವರಾಜ್ ಮೈದಾನದ ವರೆಗೆ ವಾಕಥಾನ್ ಸಾಗಿ ಬಂತು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಡಿಯಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಹಾಗೂ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 3 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ವಾಕಾಥಾನ್‌ನಲ್ಲಿ ಪಾಲ್ಗೊಂಡರು. ಕುಲಪತಿ ಡಾ. ಭಗವಾನ್ ಪ್ರತಿಜ್ಞಾ ವಿಧಿ ಬೋಧಿಸಿದರು.
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಡಾ, ಇಫ್ತೀಕರ್, ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಮೊಹಮ್ಮದ್ ಮೊಹಿಸೀನ್, ಶ್ರೀಕ್ಷೇತ್ರ ಧರ್ಮಸ್ಥಳ ಶಿಕ್ಷಣ ಸಮಾಜದ ಉಪಾಧ್ಯಕ್ಷ ಡಿ. ಸುರೇಂದ್ರ ಕುಮಾರ್, ವಿ.ವಿ. ಕುಲಸಚಿವ ಅರ್ಜುನ್ ಒಡೆಯರ್, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿಗಳಾದ ವಿವೇಕ್ ಆಳ್ವ ಮತ್ತು ಡಾ.ವಿನಯ್ ಆಳ್ವ, ದಿಶಾಬೋಧ ಪ್ರತಿಷ್ಠಾನದ ಶಿವಾಂಗಿ ರೆಡ್ಡಿ ಮತ್ತು ಜೀತು ಥಾಮಸ್ ಮತ್ತಿತರರು ಇದ್ದರು.
‘ಮಾದಕ ವ್ಯಸನಕ್ಕೆ ಇಲ್ಲ ಹೇಳಿ, ಬದುಕಿಗೆ ಹೌದು ಎನ್ನಿ’ ಎಂಬ ಘೋಷವಾಕ್ಯದ ಜೊತೆ ಕಾರ್ಯಕ್ರಮ ಸಂಪನ್ನಗೊಂಡಿತು.


