ದ್ವಿಚಕ್ರ ವಾಹನ ಢಿಕ್ಕಿ: ಕ್ಷೌರಿಕ ಸಾವು
Saturday, January 17, 2026
ಮೂಡುಬಿದಿರೆ: ವಿದ್ಯಾಗಿರಿಯಲ್ಲಿ ಕ್ಷೌರಿಕ ವೃತ್ತಿ ಮಾಡುತ್ತಿದ್ದ ವ್ಯಕ್ತಿಯೋವ೯ರಿಗೆ ಗಾಂಧಿನಗರದಲ್ಲಿ ಶುಕ್ರವಾರ ರಾತ್ರಿ ದ್ವಿಚಕ್ರ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮವಾಗಿ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಕೊಪ್ಪಳ ಜಿಲ್ಲೆಯ ಕುಕ್ಕನೂರು ಗ್ರಾಮದ ಮುತ್ತುರಾಜ ಹಡಪದ (26) ಮೃತಪಟ್ಟ ಕ್ಷೌರಿಕ.
ಶುಕ್ರವಾರ ರಾತ್ರಿ ಗಾಂಧಿನಗರದಲ್ಲಿರುವ ಹೋಟೆಲ್‌ಗೆ ಊಟಕ್ಕಾಗಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ, ವೇಗವಾಗಿ ಬಂದ ಬೈಕ್ ಇವರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಮುತ್ತುರಾಜ ಅವರು ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದ್ದಾರೆ.
ಬೈಕ್ ಚಾಲಕ ಮುರಳೀ ಚೌಹಣ್ ಎಂಬವರ ವಿರುದ್ಧ ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.