ತೆಂಕಮಿಜಾರು ಗ್ರಾ.ಪಂ.ಗೆ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಭೇಟಿ

ತೆಂಕಮಿಜಾರು ಗ್ರಾ.ಪಂ.ಗೆ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಭೇಟಿ


ಮೂಡುಬಿದಿರೆ: ತಾಲೂಕಿನ ತೆಂಕಮಿಜಾರು ಗ್ರಾಮ ಪಂಚಾಯತ್ ಗೆ  ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಅವರು ಮಂಗಳವಾರ ಭೇಟಿ ನೀಡಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರೊಂದಿಗೆ ಕೇಂದ್ರ ಸರ್ಕಾರದ ಯೋಜನೆಗಳಾದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (MGNREGA), ಪ್ರಧಾನ ಮಂತ್ರಿ ಆವಾಸ್ ಯೋಜನೆ, 15ನೇ ಹಣಕಾಸು ಅನುದಾನ, ಸ್ವಚ್ಛ ಭಾರತ ಮಿಷನ್ (SBM), ಜಲಜೀವನ್ ಮಿಷನ್ (JJM) ಮತ್ತು ರಾಜ್ಯ ಸರಕಾರದ ಯೋಜನೆಗಳಾದ ಬಸವ ವಸತಿ ಯೋಜನೆ, ಡಾ. ಬಿ.ಆರ್. ಅಂಬೇಡ್ಕರ್ ನಿವಾಸ್ ಯೋಜನೆಯ ಪ್ರಗತಿಯ ಬಗ್ಗೆ ಚರ್ಚಿಸಿ ಪರಿಶೀಲಿಸಿದರು.


ಪಂಚಾಯತ್ ರಾಜ್ ವಿಷಯಗಳಾದ ಕಟ್ಟಡ ಮತ್ತು ಭೂ ತೆರಿಗೆ ಸಂಗ್ರಹಣೆ,ವಾರ್ಡ್ ಮತ್ತು ಗ್ರಾಮ ಸಭೆ,ಗ್ರಾಮ ಪಂಚಾಯತ್ ಅಭಿವೃದ್ಧಿಯಲ್ಲಿ ಇರುವ ಅಡಚಣೆ ಮತ್ತು  ಪಂಚಾಯತ್ ಗಳು ಕೈ ಗೊಂಡಿರುವ ಉತ್ತಮ ಆಡಳಿತದ ಬಗ್ಗೆ ಮಾಹಿತಿ ಪಡೆದು ಕೊಂಡರು.

MGNREGA ಯೋಜನೆ, 15ನೇ ಹಣಕಾಸು ಅನುದಾನದಡಿ ಕಾಮಗಾರಿಯನ್ನು ಉತ್ತಮವಾಗಿ ಅನುಷ್ಠಾನಗೊಳಿಸಿದ್ದನ್ನು ತಿಳಿಸಿದರು.

JJM ಯೋಜನೆಯ ಕಾಮಗಾರಿಗಳ ಅನುಷ್ಠಾನದಲ್ಲಿ ಆಗಿರುವ ಸಮಸ್ಯೆ ಮತ್ತು ಬಹು ಗ್ರಾಮ ಕುಡಿಯುವ ನೀರಿನ ಯೋಜನೆ ಹಾಗೂ ಕುಡಿಯುವ ನೀರಿನ ಸಮಸ್ಯೆಗಳ ಬಗ್ಗೆ ಆಲಿಸಿದರು.

ಗ್ರಾಮ ಪಂಚಾಯತ್  ಎಲ್ಲಾ ಮನೆಗಳಿಂದ ಒಣಕಸವನ್ನು ಸಂಗ್ರಹಿಸಿ ವಿಲೇವಾರಿ ಮಾಡಲು ಹೆಚ್ಚಿನ ಗಮನ ನೀಡಿ SBM ಯೋಜನೆಯನ್ನು ಯಶಸ್ವಿಗೊಳಿಸಲು ಪ್ರಯತ್ನಿಸುವಂತೆ ತಿಳಿಸಿದರು.

ಹಲವಾರು ಬೇಡಿಕೆ ಮತ್ತು ಮನವಿಗಳನ್ನು ಸ್ವೀಕರಿಸಿದರು. ತನ್ನ ಕಾರ್ಯ ಚೌಕಟ್ಟಿನಲ್ಲಿ ಸದರಿ ಬೇಡಿಕೆಗಳನ್ನು ಈಡೇರಿಸಲು ಕ್ರಮ ಕೈಗೊಳ್ಳಲಾಗುವುದೆಂದು ತಿಳಿಸಿದರು.

ಗ್ರಾ.ಪಂ. ಅಧ್ಯಕ್ಷೆ ಶಾಲಿನಿ ಕೆ. ಸಾಲ್ಯಾನ್, ಮಾಜಿ ಅಧ್ಯಕ್ಷೆ ರುಕ್ಮಿಣಿ, ಸದಸ್ಯರಾದ ಹರಿಪ್ರಸಾದ್ ಶೆಟ್ಟಿ, ಜಯಲಕ್ಷ್ಮೀ ಶೆಟ್ಟಿಗಾರ್, ದಿನೇಶ್ ಬಿ. ಎಲ್., ಮಹೇಶ್, ನಿಶಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರೋಹಿಣಿ,  ಕಾರ್ಯದರ್ಶಿ ರಮೇಶ್ ಮತ್ತು ಸಿಬ್ಬಂದಿಗಳು ಹಾಜರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article