ತೋಡಾರಿನಲ್ಲಿ ಬೃಹತ್ ಹಿಂದೂ ಸಂಗಮ
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮಂಗಳೂರು ವಿಭಾಗದ ಪ್ರಚಾರಕ್ ಸುರೇಶ್ ಜಿ. ಬೌದ್ಧಿಕ್ ನೀಡಿ, ಸಮಾಜದಲ್ಲಿ ಬದಲಾವಣೆ ತರಲು ಸ್ವಯಂಸೇವಕರು ಅಳವಡಿಸಿಕೊಳ್ಳಬೇಕಾದ ಜೀವನಶೈಲಿಯ ಬಗ್ಗೆ ತಿಳಿಸಿದರು.
ಕಾರ್ಯಕ್ರಮದಲ್ಲಿ ತೋಡಾರು ಶಕ್ತಿ ಕೇಂದ್ರದ ಅಧ್ಯಕ್ಷ ಸುನೀಲ್ ಶೆಟ್ಟಿ ಹಾನ್ಯಗುತ್ತು, ಸದಾಶಿವ ಟಿ. ಸುವರ್ಣ ಬಾರ್ದಿಲ, ಶಿವಪ್ರಸಾದ್ ಭಾವದಬೈಲು, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ರಂಜಿತ್ ಪೂಜಾರಿ ತೋಡಾರು, ರೈತ ಮುಖಂಡ ಶಾಂತಿಪ್ರಸಾದ್ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಪ್ರಣಮ್ ತೋಡಾರು ಸ್ವಾಗತಿಸಿದರು, ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನವನ್ನು ವಿತರಿಸಲಾಯಿತು. ರಿಷಂತ್ ತೋಡಾರು ಕಾರ್ಯಕ್ರಮ ನಿರೂಪಿಸಿದರು.
ಆಕರ್ಷಕ ಶೋಭಾಯಾತ್ರೆ:
ಕಾರ್ಯಕ್ರಮದ ಮೊದಲಿಗೆ ಶ್ರೀ ಕ್ಷೇತ್ರ ತೋಡಾರು ದ್ವಾರದ ಬಳಿಯಿಂದ ದೈವಸ್ಥಾನದ ವಠಾರದವರೆಗೆ ಭವ್ಯ ಶೋಭಾಯಾತ್ರೆ ನಡೆಯಿತು. ಪೂರ್ಣಕುಂಭ ಹಿಡಿದ ಮಹಿಳೆಯರು, ವಿವಿಧ ಭಜನಾ ತಂಡಗಳ ಕುಣಿತ ಭಜನೆ, ಚೆಂಡೆ ಹಾಗೂ ವಾದ್ಯಘೋಷಗಳು ಮೆರವಣಿಗೆಗೆ ಕಳೆ ನೀಡಿದವು.
ಹಿಂದೂ ಸಂಗಮದ ಅಂಗವಾಗಿ ಮಕ್ಕಳಿಗೆ ಧಾರ್ಮಿಕ ಛದ್ಮವೇಷ ಸ್ಪರ್ಧೆ ಆಯೋಜಿಸಲಾಗಿತ್ತು.
