ತೆಂಕಮಿಜಾರು ಗ್ರಾ.ಪಂ.ನಲ್ಲಿ ಮಹಿಳಾ ಮತ್ತು ಮಕ್ಕಳ ಗ್ರಾಮಸಭೆ
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಖೀ ಸಂಸ್ಥೆಯ ಜಿಲ್ಲಾ ಘಟಕದ ಆಡಳಿತಾಧಿಕಾರಿ ಪ್ರಿಯ ಕೆ.ಸಿ. ಅವರು ಕಾಯ೯ಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಶಾಲೆಗೆ ಹೋಗುವ ಮಕ್ಕಳಿಗೆ ಸಾರ್ವಜನಿಕ ಸ್ಥಳಗಳಲ್ಲಿ ಎದುರಾಗುವ ಸಮಸ್ಯೆಗಳು, ಹದಿಹರೆಯದ ಮಕ್ಕಳಲ್ಲಿ ಆಗುವ ದೈಹಿಕ ಹಾಗೂ ಮಾನಸಿಕ ಬದಲಾವಣೆಗಳು, ಆನ್ಲೈನ್ ಮಧ್ಯಮ ಹಾಗೂ ಸಾಮಾಜಿಕ ಜಾಲತಾಣದಿಂದಾಗುವ ದುಷ್ಪರಿಣಾಮ ಹಾಗೂ ಹೆಚ್ಚು ಆನ್ಲೈನ್ ಆಪ್‌ಗಳಿಂದ ಮಕ್ಕಳ ವಿದ್ಯಾಭ್ಯಾಸ ಹಾಗೂ ವೈಯಕ್ತಿಕ ಜೀವನದ ಮೇಲೆ ಬೀರುವ ಪರಿಣಾಮದ ಬಗ್ಗೆ ಮಕ್ಕಳಿಗೆ ಹಾಗೂ ಪೋಷಕರಿಗೆ ಮನದಟ್ಟು ಮಾಡಿದರು.
ಶಿಕ್ಷಣ ಇಲಾಖೆಯ ಇಸಿಒ ರಾಜೇಶ್ ಅವರು ಮಕ್ಕಳ ಹಕ್ಕು ಹಾಗೂ ಕಾಯ್ದೆಯ ಬಗ್ಗೆ ಇಲಾಖೆ ಆದೇಶದ ಬಗ್ಗೆ ಮಾಹಿತಿ ನೀಡಿದರು.
ಪ.ಜಾತಿ ಮತ್ತು ಪ.ಪಂಗಡದ ವಿದ್ಯಾರ್ಥಿ ಫಲಾನುಭವಿಗಳಿಗೆ ಬರೆಯುವ ಕುರ್ಚಿ. ಆರೋಗ್ಯ ಸಹಾಯಧನದ ಚೆಕ್ ವಿತರಣೆ ಮಾಡಲಾಯಿತು.
ಗ್ರಾಮ ಆಡಳಿತಾಧಿಕಾರಿ ಸಂತೋಷ್ ಇಲಾಖಾ ಮಾಹಿತಿ ನೀಡಿದರು. ತಾಲೂಕು ಐಇಸಿ ಸಂಯೋಜಕಿ ಅನ್ವಯ ಉದ್ಯೋಗ ಖಾತರಿ ಯೋಜನೆ ಬಗ್ಗೆ ಮಾಹಿತಿ ನೀಡಿದರು.
ಸದಸ್ಯರಾದ ಲಕ್ಷ್ಮೀ, ನೇಮಿರಾಜ, ಸಮಿತಾ,ನಮಿತಾ, ರುಕ್ಮಿಣಿ, ಗೀತಾ, ಜಯಲಕ್ಷ್ಮಿ, ಬಿ.ಎಲ್. ದಿನೇಶ್ ಕುಮಾರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರೋಹಿಣಿ, ದ್ವಿತೀಯ ದರ್ಜೆ ಲೆಕ್ಕಸಹಾಯಕರಾದ ರಮೇಶ್, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ವಿವಿಧ ಶಾಲೆಗಳ ವಿದ್ಯಾರ್ಥಿಗಳು, ಮಹಿಳೆಯರು, ಗ್ರಾಮಸ್ಥರು ಉಪಸ್ಥಿತರಿದ್ದರು.