ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನಕ್ಕೆ ಅಭಯಚಂದ್ರ ಜೈನ್ ಸಂತಾಪ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನಕ್ಕೆ ಅಭಯಚಂದ್ರ ಜೈನ್ ಸಂತಾಪ


ಮೂಡುಬಿದಿರೆ: ಹೆಲಿಕಾಪ್ಟರ್ ದುರಂತದಲ್ಲಿ ಬುಧವಾರ ನಿಧನ ಹೊಂದಿದ ಮಹಾರಾಷ್ಟ್ರದ ಪುಣೆ ಸಮೀಪದ ಬಾರಾಮತಿ ಕ್ಷೇತ್ರದ ಸಜ್ಜನ ರಾಜಕಾರಣಿಯಾಗಿದ್ದ ಅಜಿತ್ ಪವಾರ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಜನರ ಮೇಲೆ ಅಪಾರ ಅಭಿಮಾನವಿತ್ತು ಎಂದು ಮಾಜಿ ಸಚಿವ ಅಭಯಚಂದ್ರ ಜೈನ್ ಹೇಳಿದರು.

ಬಾರಾಮತಿ ಕ್ಷೇತ್ರವು ಮಹಾರಾಷ್ಟ್ರ ರಾಜಕಾರಣದಲ್ಲಿ ಮಹತ್ವ ಪಡೆದ ಕ್ಷೇತ್ರವಾಗಿದ್ದು, ಅವರು ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು ಉಪಮುಖ್ಯಮಂತ್ರಿಯಾಗಿಯೂ ಸೇವೆ ಸಲ್ಲಿಸಿದ್ದರು ಎಂದು ಜೈನ್ ಸ್ಮರಿಸಿದರು.

2004ರಲ್ಲಿ ತಾವು ಕರ್ನಾಟಕ ಸರ್ಕಾರದ ಮುಖ್ಯ ಸಚೇತರಾಗಿದ್ದ ವೇಳೆ ಬಾಂಬೆಯಲ್ಲಿ ನಡೆದ ಸಮ್ಮೇಳನಗಳಲ್ಲಿ ಅವರನ್ನು ಭೇಟಿಯಾಗುವ ಅವಕಾಶ ಲಭಿಸಿತ್ತು ಎಂದು ನೆನಪಿಸಿಕೊಂಡ ಅವರು, ನಿಧನಕ್ಕೆ ತೀವ್ರ ಸಂತಾಪ ಸೂಚಿಸಿ ಮೃತ ಆತ್ಮಕ್ಕೆ ಶಾಂತಿ ಕೋರಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article