ಪುತ್ತಿಗೆ ಗ್ರಾ.ಪಂ.ಗೆ ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಭೇಟಿ
Wednesday, January 21, 2026
ಮೂಡುಬಿದಿರೆ: ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಅವರು ಮೂಡುಬಿದಿರೆ ತಾಲೂಕಿನ ಪುತ್ತಿಗೆ ಗ್ರಾಮ ಪಂಚಾಯತ್ ಗೆ ಬುಧವಾರ ಭೇಟಿ ನೀಡಿ ಅಭಿವೃದ್ಧಿ ಕಾಮಗಾರಿಗಳು, ವಿವಿಧ ಯೋಜನೆಗಳು ಮತ್ತು ಸವಲತ್ತುಗಳ ಸದುಪಯೋಗದ ಬಗ್ಗೆ ಅಧ್ಯಕ್ಷರು ಮತ್ತು ಸದಸ್ಯರಲ್ಲಿ ಮಾತುಕತೆ ನಡೆಸಿದರು.
ಪಂಚಾಯತ್ ಅಧ್ಯಕ್ಷೆ ರಾಧ, ಉಪಾಧ್ಯಕ್ಷ ದಯಾನಂದ, ಮಾಜಿ ಅಧ್ಯಕ್ಷ ಪ್ರವೀಣ್ ಶೆಟ್ಟಿ ಮತ್ತು ಸದಸ್ಯರು, ಪಿಡಿಒ ಭೀಮಾ ಬಿ.ನಾಯಕ್,ಅಕ್ರಮ ಸಕ್ರಮ ಸಮಿತಿಯ ಸದಸ್ಯ ಮಿತ್ತಬೈಲು ವಾಸುದೇವ ನಾಯಕ್, ಕಾಂಗ್ರೆಸ್ ವಕ್ತಾರ ರಾಜೇಶ್ ಕಡಲಕೆರೆ ಮತ್ತಿತರರು ಈ ಸಂದಭ೯ದಲ್ಲಿದ್ದರು.