ಆಳ್ವಾಸ್‌ನಲ್ಲಿ ನಡೆಯುವ ದೇಶದ ಎಲ್ಲಾ ಕ್ರೀಡಾಕೂಟಗಳಿಗೂ ಹೆಗ್ಗುರುತು: ಯು.ಟಿ. ಖಾದರ್

ಆಳ್ವಾಸ್‌ನಲ್ಲಿ ನಡೆಯುವ ದೇಶದ ಎಲ್ಲಾ ಕ್ರೀಡಾಕೂಟಗಳಿಗೂ ಹೆಗ್ಗುರುತು: ಯು.ಟಿ. ಖಾದರ್


ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಇಲ್ಲಿನ ಸ್ವರಾಜ್ ಮೈದಾನದಲ್ಲಿ ಹಮ್ಮಿಕೊಂಡ ಐದು ದಿನಗಳ ‘85ನೇ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ 2025-26’ ಸೋಮವಾರ ಅಚ್ಚುಕಟ್ಟಾದ ಮೂಲಸೌಕರ್ಯ, ತಾಂತ್ರಿಕ ನಿಖರತೆ, ಸಮಯ ನಿರ್ವಹಣೆ, ಆತಿಥ್ಯ ವ್ಯವಸ್ಥೆಗಳ, ಶಿಸ್ತುಬದ್ಧತೆ, ಅದ್ಧೂರಿ ಮೆರವಣಿಗೆಗಳೊಂದಿಗೆ ಆರಂಭಗೊಂಡಿತು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆತಿಥ್ಯದಲ್ಲಿ ೬ನೇ ಬಾರಿಗೆ ನಡೆಯುತ್ತಿರುವ 85ನೇ ಕ್ರೀಡಾಕೂಟವನ್ನು ಉದ್ಘಾಟಿಸಿದ ವಿಧಾನಸಭೆಯ ಸಭಾಪತಿ ಯು.ಟಿ. ಖಾದರ್ ಫರೀದ್  ಮಾತನಾಡಿ, ಆಳ್ವಾಸ್‌ನಲ್ಲಿ ನಡೆಯುವ ಕ್ರೀಡಾಕೂಟವು ಜಾಗತಿಕ ಕೂಟದ ಮಾದರಿ. ದೇಶದ ಎಲ್ಲಾ ಕ್ರೀಡಾಕೂಟಗಳಿಗೂ ಹೆಗ್ಗುರುತು’ ಎಂದು ಶ್ಲಾಘಿಸಿದರು.


’ವಿಶ್ವದ ಸಂಸ್ಕೃತಿಗಳ ಸಾರ ಭಾರತದ ಸಂಸ್ಕೃತಿಗಳ, ಭಾರತದ ಸಂಸ್ಕೃತಿ ಸಾರ ಕರ್ನಾಟಕ, ಕರ್ನಾಟಕದ ಸಂಸ್ಕೃತಿಗಳ ಸಾರ ದಕ್ಷಿಣ ಕನ್ನಡ, ದಕ್ಷಿಣ ಕನ್ನಡದ ಸಂಸ್ಕೃತಿಯ ಸಾರ ಆಳ್ವಾಸ್‌ನಲ್ಲಿ’ ಎಂದು ಬಣ್ಣಿಸಿದರು.

ವಿಧಾನಸಭೆಯ ಸಭಾಪತಿ ಯು.ಟಿ. ಖಾದರ್ ಕ್ರೀಡಾ ಒಕ್ಕೂಟದ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ. ಭಗವಾನ್ ಬಿ.ಸಿ., ವಿಶ್ವವಿದ್ಯಾಲಯದ ಹಾಗೂ ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಧ್ವಜಾರೋಹಣ ನೆರವೇರಿಸಿದರು.

ಕರ್ನಾಟಕ ಸರ್ಕಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮೊಹಮ್ಮದ್ ಮೊಹಿಸೀನ್ ಮಾತನಾಡಿ, ಕ್ರೀಡೆ ನಮ್ಮ ಏಕತೆಯ ಸಂಕೇತ. ಕ್ರೀಡಾ ಸ್ಫೂರ್ತಿಯ ಗೆಲುವು ನಮ್ಮದಾಗಬೇಕು. ಆಳ್ವಾಸ್ ಉತ್ತಮ ಶಿಕ್ಷಣ ನೀಡುವ ಸಂಸ್ಥೆಯಾಗಿದೆ. ಕ್ರೀಡಾಕೂಟ ಯಶಸ್ವಿಯಾಗಲಿ ಎಂದು ಹಾರೈಸಿದರು.

ಕೂಟದ ವೀಕ್ಷಕರಾದ ವಿ. ಶಂಕರ್ ಮಾತನಾಡಿ, ಡಾ. ಆಳ್ವ ಅವರ ಸಾಧನೆ ಅಪರಿಮಿತ. ಈ ರೀತಿ ಬೃಹತ್ ಕೂಟ ಸಂಘಟಿಸಲು ಆಳ್ವಾಸ್‌ಗೆ ಮಾತ್ರ ಸಾಧ್ಯ ಎಂದರು.

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ. ಭಗವಾನ್ ಬಿ.ಸಿ. ಮಾತನಾಡಿ, ಅತ್ಯುತ್ತಮ ಆತಿಥ್ಯ, ಸಂಘಟನೆ ಹಾಗೂ ಅಚ್ಚುಕಟ್ಟುತನದ ಸಾಕ್ಷಾತ್ಕಾರದಂತೆ ಡಾ. ಎಂ. ಮೋಹನ ಆಳ್ವ ಕ್ರೀಡಾಕೂಟ ಸಂಘಟಿಸಿದ್ದಾರೆ ಎಂದು ಅಭಿನಂದಿಸಿದರು.

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಸಚಿವ ಅರ್ಜುನ್, ಮಾಜಿ ಸಚಿವ ಅಭಯಚಂದ್ರ ಜೈನ್, ಇಫ್ತಿಕರ್ ಅಲಿ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ, ವ್ಯವಸ್ಥಾಪಕ ಟ್ರಸ್ಟಿಗಳಾದ ವಿವೇಕ್ ಆಳ್ವ, ಡಾ. ವಿನಯ್ ಆಳ್ವ ಮತ್ತಿತರರು ಇದ್ದರು. 

ಕ್ರೀಡಾಕೂಟದಲ್ಲಿ ದೇಶದ 304ಕ್ಕೂ ಅಧಿಕ ವಿಶ್ವವಿದ್ಯಾಲಯಗಳ ನಾಲ್ಕು ಸಾವಿರಕ್ಕೂ ಅಧಿಕ ಅಥ್ಲೀಟ್‌ಗಳು ಹಾಗೂ ಸುಮಾರು 1000 ಕ್ರೀಡಾಧಿಕಾರಿಗಳು ಪಾಲ್ಗೊಂಡಿದ್ದಾರೆ. 

ಈ ಸಂದರ್ಭದಲ್ಲಿ ಮಹಿಳಾ ಕಬಡ್ಡಿ ವಿಶ್ವಕಪ್ ವಿಜೇತ ಭಾರತೀಯ ತಂಡ ಪ್ರತಿನಿಧಿಸಿದ ಧನಲಕ್ಷ್ಮೀ ಅವರನ್ನು ಸನ್ಮಾನಿಸಲಾಯಿತು.

ರಾಜೇಶ್ ಡಿಸೋಜಾ, ವೇಣುಗೋಪಾಲ್, ರಾಮಚಂದ್ರ ಕಾರ್ಯಕ್ರಮ ನಿರೂಪಿಸಿದರು.


ಮಹಿಳೆಯರ ಮೊದಲ ಚಿನ್ನ ಮುಡಿಗೇರಿಸಿದ ‘ಆಳ್ವಾಸ್’:

ಇಲ್ಲಿನ ಸ್ವರಾಜ್ ಮೈದಾನದಲ್ಲಿ ಸೋಮವಾರ ಆರಂಭಗೊಂಡ ಐದು ದಿನಗಳ ‘85ನೇ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ 2025-26’ರ ಮೊದಲ ದಿನ ನಡೆದ ಮಹಿಳೆಯರ ವಿಭಾಗದ ಮೊದಲ ಸ್ಪರ್ಧೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಕ್ರೀಡಾ ದತ್ತು ಯೋಜನೆಯ ವಿದ್ಯಾರ್ಥಿನಿ ನಿರ್ಮಲಾ ಚಿನ್ನಕ್ಕೆ ಮುತ್ತಿಕ್ಕಿದರು.

ಆಳ್ವಾಸ್ ಸ್ವಾಯತ್ತ ಕಾಲೇಜಿನ ವಿದ್ಯಾರ್ಥಿನಿ ನಿರ್ಮಲಾ 10 ಸಾವಿರ ಮೀಟರ್ಸ್ ಓಟದಲ್ಲಿ ಮಂಗಳೂರು ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಿದ್ದು, ಮೊದಲಿಗರಾದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article