ಮೂಡುಬಿದಿರೆಯಲ್ಲಿ ಭಾರತೀಯ ಸೇನಾ ನೇಮಕಾತಿ ರ‍್ಯಾಲಿಯ ಪೂರ್ವಸಿದ್ಧತೆ: ಡಿಸಿ ಎಚ್.ವಿ. ದಶ೯ನ್ ಸ್ಥಳ ಪರಿಶೀಲನೆ
Wednesday, January 21, 2026
ಮೂಡುಬಿದಿರೆ: ಅಗ್ನಿಪಥ್ ಯೋಜನೆಯಡಿ ಜನವರಿ 28ರಿಂದ ಫೆಬ್ರವರಿ 14ರವರೆಗೆ ಸ್ವರಾಜ್ಯ ಮೈದಾನದಲ್ಲಿ ನಡೆಯಲಿರುವ ಭಾರತೀಯ ಸೇನಾ ನೇಮಕಾತಿ ರ‍್ಯಾಲಿಯ ಪೂರ್ವಸಿದ್ಧತೆಯನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರು ಬುಧವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ರಾಜ್ಯದ 11 ಜಿಲ್ಲೆಗಳಿಂದ ಪ್ರತಿದಿನ ಸುಮಾರು 2,000ಕ್ಕೂ ಅಧಿಕ ಅಭ್ಯರ್ಥಿಗಳು ರ‍್ಯಾಲಿಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ರ‍್ಯಾಲಿ ಪ್ರಕ್ರಿಯೆ ಪ್ರತಿದಿನ ಬೆಳಗ್ಗೆ 3 ಗಂಟೆಯಿಂದ ಆರಂಭವಾಗಲಿದೆ. ಪಾಲ್ಗೊಳ್ಳುವ ಅಭ್ಯರ್ಥಿಗಳಿಗೆ ಕುಡಿಯುವ ನೀರು, ಶೌಚಾಲಯ, ಆರೋಗ್ಯ ಸೇವೆ, ಸಂಚಾರ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳ ವ್ಯವಸ್ಥೆಯ ಕುರಿತು ಆರ್ಮಿ ರಿಕ್ರೂಟ್‌ಮೆಂಟ್ ಡೈರೆಕ್ಟರ್ ಸೋನು ಮಹಾರಾಜನ್ ಜಿಲ್ಲಾಧಿಕಾರಿಗೆ ಮಾಹಿತಿ ನೀಡಿದರು.
ರ‍್ಯಾಲಿ ಶಿಸ್ತುಬದ್ಧವಾಗಿ ಹಾಗೂ ಸುಗಮವಾಗಿ ನಡೆಯುವಂತೆ ಜಿಲ್ಲಾಧಿಕಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ಮೂಡುಬಿದಿರೆ ತಹಸೀಲ್ದಾರ್ ಶ್ರೀಧರ್ ಮುಂದಲಮನಿ, ಕಂದಾಯ ನಿರೀಕ್ಷಕ ಮಂಜುನಾಥ್, ಮಾಜಿ ಸಚಿವ ಅಭಯಚಂದ್ರ ಜೈನ್, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ, ಟ್ರಸ್ಟಿ ವಿವೇಕ ಆಳ್ವ, ಪುರಸಭೆ ಮುಖ್ಯಾಧಿಕಾರಿ ಇಂದು ಎಂ. ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.