ರಾಜ್ಯ ಮಟ್ಟದ ಸ್ಕೌಟ್ಸ್ ಮತ್ತು ಗೈಡ್ಸ್ ವಿಭಾಗದ ವಿವಿಧ ಗೀತಗಾಯನ ಸ್ಪರ್ಧೆಗಳಲ್ಲಿ ಮೂಡುಬಿದಿರೆಯ ಆಳ್ವಾಸ್ ಶಾಲೆಗಳು ಹಾಗೂ ಪಿಯು ಕಾಲೇಜು ಅತ್ಯುತ್ತಮ ಸಾಧನೆ
ಕಬ್ ಮತ್ತು ಬುಲ್ ಬುಲ್ ವಿಭಾಗದಲ್ಲಿ ಆಳ್ವಾಸ್ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯು ದೇಶಭಕ್ತಿ ಗೀತಗಾಯನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದೆ. ರೋವರ್ ವಿಭಾಗ ಜನಪದ ಗೀತಗಾಯನ ಸ್ಪರ್ಧೆಯಲ್ಲಿ ಆಳ್ವಾಸ್ ಪಿಯು ಕಾಲೇಜು ಪ್ರಥಮ ಸ್ಥಾನ ಪಡೆದಿದೆ.
ದಳನಾಯಕರ ವಿಭಾಗ: ಸ್ಕೌಟ್ ವಿಭಾಗದ ಗೀತಗಾಯನದಲ್ಲಿ ಆಳ್ವಾಸ್ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ಶ್ವೇತಾ ಪೈ ಹಾಗೂ ಗೈಡ್ ವಿಭಾಗದಲ್ಲಿ ಅದೇ ಶಾಲೆಯ ನಂದಿನಿ ದ್ವಿತೀಯ ಸ್ಥಾನಗಳನ್ನು ಪಡೆದಿದ್ದಾರೆ.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆ ಹಾಗೂ ಬಳ್ಳಾರಿ ಜಿಲ್ಲಾ ಸಂಸ್ಥೆಯ ವತಿಯಿಂದ ಭನುವಾರ ಬಳ್ಳಾರಿಯ ಜಿಂದಾಲ್ ಆದರ್ಶ್ ವಿದ್ಯಾಲಯದಲ್ಲಿ ಈ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಈ ಸ್ಪರ್ಧೆಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯು ಸಮಗ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಳ್ಳುವಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು, ಶಿಕ್ಷಕರ ಸಾಧನೆ ಪ್ರಮುಖ ಪಾತ್ರ ವಹಿಸಿದೆ.
ಸಾಧಕ ವಿದ್ಯಾರ್ಥಿಗಳನ್ನು ಹಾಗೂ ಮಾರ್ಗದರ್ಶಕ ಶಿಕ್ಷಕರನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ.