ಇರುವೈಲಿನಲ್ಲಿ ಅಂಚೆ ಜನಸಂಪರ್ಕ ಅಭಿಯಾನ, ಆಧಾರ್ ನೋಂದಾಣಿ ತಿದ್ದುಪಡಿ ಶಿಬಿರ
ಇರುವೈಲು ಗ್ರಾಮ ಪಂಚಾಯತ್‌ನ ಅಧ್ಯಕ್ಷೆ ಲಲಿತ ಮುಗೇರ ಶಿಬಿರವನ್ನು ಉದ್ಘಾಟಿಸಿ ಶುಭ ಹಾರೈಸಿದರು.
ಕೆಡಿಪಿ ಸದಸ್ಯ ಪ್ರವೀಣ್ ಪೂಜಾರಿ ಮಾತನಾಡಿ, ಸಾರ್ವಜನಿಕರಿಗೆ ಅನುಕೂಲವಾಗುವಂತೆ ಫ್ರೆಂಡ್ಸ್ ಕ್ಲಬ್ ಹಾಗೂ ಭಾರತೀಯ ಅಂಚೆ ಇಲಾಖೆ ಜತೆಗೂಡಿ ಆಧಾರ್ ತಿದ್ದುಪಡಿ, ಆರೋಗ್ಯ ವಿಮೆ, ಅಪಘಾತ ವಿಮೆಯ ಪ್ರಯೋಜನವನ್ನು ಪಡೆಯಲು ಜನರಿರುವೆಡೆಗೆ ಸಾಗಿ ಅಂಚೆ ಇಲಾಖೆಯ ಯೋಜನೆಗಳನ್ನು ತಲುಪಿಸುತ್ತಿದ್ದು ಇದರ ಸದುಪಯೋಗ ಪಡೆದುಕೊಳ್ಳಿ ಎಂದು ಸಲಹೆ ನೀಡಿದರು.
ಅಂಚೆ ಮಾರುಕಟ್ಟೆ ಇಲಾಖೆಯ ಕಾರ್ಯನಿರ್ವಾಹಕ ಸುಭಾಷ್ ಪಿ ಸಾಲ್ಯಾನ್ ಮಾತನಾಡಿ, ಕೇಂದ್ರ ಸರ್ಕಾರ ಬೇರೆ ಬೇರೆ ರೀತಿಯ ಯೋಜನೆಗಳನ್ನು ಅಂಚೆ ಇಲಾಖೆಯಲ್ಲಿ ಜಾರಿಗೆ ತಂದಿದೆ. ಆ ಎಲ್ಲಾ ಯೋಜನೆಗಳು ಒಂದೇ ಸೂರಿನಡಿಯಲ್ಲಿ ಜನರಿಗೆ ತಲುಪಿಸಬೇಕೆಂಬ ಉದ್ದೇಶದಿಂದ ಹೆಚ್ಚಾಗಿ ಹಳ್ಳಿಗಳಲ್ಲಿ ಅಂಚೆ ಇಲಾಖೆಯ ಯೋಜನೆಗಳನ್ನು ಹಳ್ಳಿಗಳಿಗೆ ತಲುಪಿಸುವ ವ್ಯವಸ್ಥೆಯನ್ನು ಮಾಡುತ್ತಿದ್ದೇವೆ. ಗ್ರಾಮದ ಜನರು ಪ್ರಯೋಜನವನ್ನು ಪಡೆದುಕೊಂಡು ಉಳಿದವರಿಗೂ ಮಾಹಿತಿಯನ್ನು ನೀಡಿ ಎಂದರು.
ಫ್ರೆಂಡ್ಸ್ ಕ್ಲಬ್‌ನ ಅಧ್ಯಕ್ಷ ರಾಜೇಶ್ ಪೂಜಾರಿ ದೇವರಗುಡ್ಡೆ, ಹೊಸಬೆಟ್ಟು ಸಹಕಾರಿ ಸಂಘದ ಅಧ್ಯಕ್ಷ ರಾಜೇಶ್ ಪೂಜಾರಿ ಕಾಳೂರು, ಇರುವೈಲು ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷೆ ಸುಜಾತ ಜೆ ಶೆಟ್ಟಿ, ಸದಸ್ಯರಾದ ಪೂವಪ್ಪ ಸಾಲ್ಯಾನ್, ಪ್ರದೀಪ್ ಶೆಟ್ಟಿ, ದೀಪಾ ದಿನೇಶ್, ಯಶೋಧರ್ ಪೂಜಾರಿ ಕೆ, ದಿನೇಶ್ ಪಂಜ, ಕಿಶೋರ್ ಶೆಟ್ಟಿ, ಶೇಖರ್ ಪೂಜಾರಿ, ನಾರಾಯಣ ಪೂಜಾರಿ ಉಪಸ್ಥಿತರಿದ್ದರು.