ಜ.10 ರಂದು ಈಶ್ವರಮಂಗಲದಲ್ಲಿ ಆದರ್ಶವಿವಿಧೋದ್ದೇಶ ಸಹಕಾರ ಸಂಘದ 17ನೇ ಶಾಖೆ ಉದ್ಘಾಟನೆ
ಶುಕ್ರವಾರ ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿ, 30,900 ಸದಸ್ಯರನ್ನು ಹೊಂದಿರುವ ಸಂಘ ಪ್ರಸ್ತುತ ಸಾಲಿನಲ್ಲಿ 829.88 ಕೋಟಿ ವ್ಯವಹಾರವನ್ನು ನಡೆಸುವ ಮೂಲಕ 2.01 ಕೋಟಿ ರೂ. ಲಾಭಾಂಶ ಗಳಿಸಿದೆ. ಸಂಘವು 161 ಕೋಟಿ ರೂ. ರೇವಣಿಯನ್ನು ಹೊಂದಿದೆ. 143 ಕೋಟಿ ರೂ. ಸಾಲ ವಿತರಿಸಿದೆ. 3.44 ಕೋಟಿ ರೂ. ಪಾಲು ಬಂಡವಾಳವನ್ನು ಸಂಘ ಹೊಂದಿದೆ. ಅವಿಭಜಿತ ದ.ಕ. ಜಿಲ್ಲೆಯ ಅತ್ಯುತ್ತಮ ಸಹಕಾರ ಸಂಘ ಹಾಗೂ ಉತ್ತಮ ವಿವಿಧೋದ್ದೇಶ ಸಹಕಾರ ಸಂಘ ಎಂಬ ಪ್ರಶಸ್ತಿಗೂ ಪಾತ್ರವಾಗಿದೆ. ಆರಂಭದಿಂದಲೇ ‘ಎ’ ವರ್ಗದ ಶ್ರೇಷ್ಟತೆಯನ್ನು ಕಾಪಾಡಿಕೊಂಡು ಬಂದು ಸದಸ್ಯರಿಗೆ ಶೇ.10ಕ್ಕಿಂತ ಮೇಲ್ಪಟ್ಟು ಡಿವಿಡೆಂಟ್ ನೀಡಿದ ಏಕೈಕ ಸಂಘವಾಗಿದೆ. ಸಮಾಜಸೇವೆಯ ಭಾಗವಾಗಿ 1,545 ಮಕ್ಕಳಿಗೆ 31.12 ಲಕ್ಷ ರೂ. ಉಚಿತ ವಿದ್ಯಾನಿಧಿಯನ್ನು ವಿತರಿಸಿದೆ ಎಂದವರು ತಿಳಿಸಿದರು.
ಈಗಾಗಲೇ ಪುತ್ತೂರು, ಸುಳ್ಯ, ಸುಬ್ರಹ್ಮಣ್ಯ, ವಿಟ್ಲ, ಉಜಿರೆ, ಕಡಬ, ಸವಣೂರು, ಸಾಲೆತ್ತೂರು, ಕುಂಬ್ರ, ಬೆಳ್ಳಾರೆ, ಪಂಜ, ಬೊಳುವಾರು, ಮಡಂತ್ಯಾರು, ಬಿ.ಸಿ. ರೋಡ್ ಕಲ್ಲಡ್ಕ ಹಾಗೂ ಪಾಂಡೇಶ್ವರದಲ್ಲಿ ಶಾಖೆಗಳನ್ನು ಹೊಂದಿರುವ ಸಂಘದ 17ನೇ ಶಾಖೆ ಈಶ್ವರಮಂಗಲದ ಗಣೇಶ್ ಕಾಂಪ್ಲೆಕ್ಸ್‌ನ ಪ್ರಥಮ ಮಹಡಿಯಲ್ಲಿ ಲೋಕಾರ್ಪಣೆಗೊಳ್ಳಲಿದೆ.
ರ್ಯಕ್ರಮದ ಅಧ್ಯಕ್ಷತೆಯನ್ನು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಕೋಡಿಂಬಾಡಿ ವಹಿಸಲಿದ್ದಾರೆ. ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಉದ್ಘಾಟನೆ ಮಾಡಲಿದ್ದಾರೆ. ಭದ್ರತಾ ಕೊಠಡಿಯನ್ನು ಮಾಜಿ ಶಾಸಕ ಸಂಜೀವ ಮಠಂದೂರು, ಕಂಪ್ಯೂಟರ್ ಉದ್ಘಾಟನೆಯನ್ನು ಕಾವು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷ ನನ್ಯ ಅಚ್ಚುತ ಮೂಡತ್ತಾಯ ಹಾಗೂ ಪ್ರಥಮ ಠೇವಣಿ ಪತ್ರವನ್ನು ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ಬಾಲ್ಯೊಟ್ಟು ಬಿಡುಗಡೆ ಮಾಡಲಿದ್ದಾರೆ.
ದ.ಕ. ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕ ಎಸ್.ಬಿ. ಜಯರಾಮ್ ರೈ ಬಳಜ್ಜ, ನೆಟ್ಟಣಿಗೆ ಮುಡ್ನೂರು ಗ್ರಾ.ಪಂ. ಅಧ್ಯಕ್ಷೆ ಪೌಝಿಯಾ ಇಬ್ರಾಹಿಂ ಕೆ, ಗಣೇಶ್ ಕಾಂಪ್ಲೆಕ್ಸ್ ಮಾಲಕ ಗಣೇಶ್ ರೈ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.
ಕೊಡಗು-ಉಡುಪಿಗೆ ವಿಸ್ತರಣೆ:
2002 ಮಾರ್ಚ್ 11 ರಂದು ಪುತ್ತೂರಿನಲ್ಲಿ ಹುಟ್ಟಿದ ಆದರ್ಶ ವಿವಿಧೋದ್ದೇಶ ಸಹಕಾರ ಸಂಘ ಈ ತನಕ ಕೇವಲ ಜಿಲ್ಲೆಗೆ ಮಾತ್ರ ಸೀಮಿತವಾಗಿತ್ತು. ಸಂಘಕ್ಕೆ ಪ್ರಸ್ತುತ 23ನೇ ವರ್ಷ. ಮುಂದಿನ 25ನೇ ವರ್ಷದ ತನ್ನ ಬೆಳ್ಳಿ ಹಬ್ಬಕ್ಕೆ ಮೊದಲು ಮೂರು ಶಾಖೆಗಳನ್ನು ತೆರೆಯಲಾಗುವುದು. ಮೊದಲ ಬಾರಿಗೆ ಜಿಲ್ಲೆಯ ಗಡಿಯನ್ನು ಮೀರಿ ಕೊಡಗು ಹಾಗೂ ಉಡುಪಿ ಜಿಲ್ಲೆಯಲ್ಲಿ ತನ್ನ ಶಾಖೆಗಳನ್ನು ತೆರೆಯಲಿದೆ. ಸಂಘದ ಸ್ವಂತ ಕಟ್ಟಡ ನಿರ್ಮಾಣಕ್ಕಾಗಿ 1.29 ರೂ. ಕೋಟಿ ಮೌಲ್ಯದ ಜಾಗ ಖರೀದಿ ಮಾಡಲಾಗಿದ್ದು, ಇದರಲ್ಲಿ 5 ಕೋಟಿ ರೂ. ವೆಚ್ಚದಲ್ಲಿ ಸಂಘದ ಕೇಂದ್ರ ಕಚೇರಿ ಮತ್ತು ವಾಣಿಜ್ಯ ಸಂಕೀರ್ಣ ಮಳಿಗೆಯ ಕಾಮಗಾರಿ ನಡೆಯುತ್ತಿದೆ ಎನ್ನುತ್ತಾರೆ ಸಹಕಾರ ರತ್ನ ಸೀತಾರಾಮ ರೈ ಸವಣೂರು ಅವರು.
ಪತ್ರಿಕಾಗೋಷ್ಟಿಯಲ್ಲಿ ಸಂಘದ ಉಪಾಧ್ಯಕ್ಷ ಎನ್. ಸುಂದರ ರೈ ಸವಣೂರು, ನಿರ್ದೇಶಕ ಅಶ್ವಿನ್ ಎಲ್. ಶೆಟ್ಟಿ, ನಿರ್ದೇಶಕ ಜೈರಾಜ್ ಭಂಡಾರಿ ನೊಣಾಲು, ಮಹಾಪ್ರಬಂಧಕ ವಸಂತ ಜಾಲಾಡಿ, ಸಹಾಯಕ ಮಹಾ ಪ್ರಬಂಧಕ ಸುನಾದ್‌ರಾಜ್ ಶೆಟ್ಟಿ ಉಪಸ್ಥಿತರಿದ್ದರು.