ತಂದೆಯಿಂದ ಮಗನಿಗೆ ಕೋವಿಯಿಂದ ಗುಂಡು ಹಾರಿಸಿ ಕೊಲೆ
Saturday, January 24, 2026
ಪುತ್ತೂರು: ತಂದೆಯಿಂದ ಮಗನಿಗೆ ಕೋವಿಯಿಂದ ಗುಂಡು ಹಾರಿಸಿ ಕೊಲೆ ಮಾಡಿದ ಘಟನೆ ಕಡಬ ಪೋಲೀಸ್ ಠಾಣಾ ವ್ಯಾಪ್ತಿಯ ರಾಮಕುಂಜದ ಪಾದೆ ಎಂಬಲ್ಲಿ ವರದಿಯಾಗಿದೆ.
ತಂದೆ ವಸಂತ ಪೂಜಾರಿ ಎಂಬಾತನಿಂದ ಕೃತ್ಯ. ಮೋಕ್ಷ (17) ಗುಂಡೇಟು ತಗುಲಿ ಸಾವನ್ನಪ್ಪಿದ ಮಗ.
ಘಟನೆಯ ಕುರಿತು ವಸಂತ ಪೂಜಾರಿ ವಿರುದ್ಧ ಆತನ ಪತ್ನಿ ಜಯಶ್ರೀ ದೂರು ದಾಖಲಿಸಿದ್ದಾರೆ.
ಶೂಟ್ ಮಾಡಿದ ಬಳಿಕ ಚಾಕುವಿನಿಂದ ತನ್ನನ್ನು ವಸಂತ ಪೂಜಾರಿ ಕೊಯ್ದುಕೊಂಡಿದ್ದು, ಸ್ಥಳೀಯರು
ಗಾಯಗೊಂಡ ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಕಳೆದ ಒಂದು ವರ್ಷದಿಂದ ಮನೆಯಲ್ಲಿ ತಂದೆ ಮತ್ತು ಮಗ ಮಾತ್ರ ಇದ್ದು, ಪತ್ನಿ ಜಯಶ್ರೀ ಪತಿಯೊಂದಿಗೆ ಮನಸ್ತಾಪಗೊಂಡು ಮಂಗಳೂರಿನ ತನ್ನ ತಾಯಿ ಮನೆಯಲ್ಲಿದ್ದರು ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
