ಸಂತ ಫಿಲೋಮಿನದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ
Sunday, January 25, 2026
ಪುತ್ತೂರು: ಇಲ್ಲಿನ ಸಂತ ಫಿಲೋಮಿನ ಕಾಲೇಜಿನಲ್ಲಿ (ಸ್ವಾಯತ್ತ) ಪುತ್ತೂರಿನಲ್ಲಿ ಜ.23 ರಂದು ಚುನಾವಣಾ ಸಾಕ್ಷರತಾ ಸಂಘ ಮತ್ತು ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಆಚರಿಸಲಾಯಿತು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಕಾಲೇಜಿನ ಉಪ ಪ್ರಾಂಶುಪಾಲ ಡಾ. ವಿಜಯಕುಮಾರ್ ಎಂ. ರಾಷ್ಟ್ರೀಯ ಮತದಾರರ ದಿನಾಚರಣೆ ಮಹತ್ವವನ್ನು ವಿವರಿಸುತ್ತಾ ಪ್ರತಿಯೊಬ್ಬ ನಾಗರಿಕನೂ ತನ್ನ ಹಕ್ಕನ್ನು ಚಲಾಯಿಸುವ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸಲು ಕರೆ ನೀಡಿದರು.
ಕಾಲೇಜಿನ ಪ್ರಾಂಶುಪಾಲರಾದ ಡಾ. ಆಂಟೋನಿ ಪ್ರಕಾಶ್ ಮೊಂತೇರೊ ಅವರು ರಾಷ್ಟ್ರೀಯ ಮತದಾರರ ದಿನಾಚರಣೆಯ ಪ್ರತಿಜ್ಞಾವಿಧಿಯನ್ನು ಬೋಧಿಸಿದರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಧ್ಯಾಪಕ ವೃಂದ ಹಾಗೂ ವಿದ್ಯಾರ್ಥಿ ವೃಂದದವರು ಭಾಗವಹಿಸಿದ್ದರು.
