ಸಂತ ಫಿಲೋಮಿನಾ ಕಾಲೇಜಿನಲ್ಲಿ ಗಣರಾಜ್ಯ ದಿನಾಚರಣೆ
Thursday, January 29, 2026
ಪುತ್ತೂರು: ಇಲ್ಲಿನ ಸಂತ ಫಿಲೋಮಿನಾ ಕಾಲೇಜಿನಲ್ಲಿ (ಸ್ವಾಯತ್ತ) 77ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು.
ಪ್ರಾಂಶುಪಾಲರಾದ ರೆ. ಡಾ. ಆಂಟನಿ ಪ್ರಕಾಶ್ ಮೊಂತೇರೋ ಅವರು ಧ್ವಜಾರೋಹಣ ನೆರವೇರಿಸಿ, ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಗೌರವಿಸುವಂತೆ ತಿಳಿಸಿದರು. ಶಿಸ್ತು ಮತ್ತು ಪರಿಶ್ರಮದಿಂದ ನಮ್ಮ ದೇಶದ ಪ್ರಗತಿಗೆ ಸಹಕಾರಿಯಾಗುವುದು ನಮ್ಮೆಲ್ಲರ ಕರ್ತವ್ಯ ಎಂದು ನುಡಿದರು.
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತ ಉಪಸ್ಥಿತರಿದ್ದರು. ಸಮಾರಂಭದಲ್ಲಿ ಎನ್‌ಸಿಸಿ ಕೆಡೆಟುಗಳು ಭಾಗವಹಿಸಿದರು. ಉಪ ಪ್ರಾಂಶುಪಾಲರು, ವಿಭಾಗ ಮುಖ್ಯಸ್ಥರು ಮತ್ತು ಉಪನ್ಯಾಸಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.


