ಸಂತ ಫಿಲೋಮಿನಾ ಕಾಲೇಜಿನಲ್ಲಿ ರಾಷ್ಟ್ರೀಯ ಗಣಿತ ದಿನಾಚರಣೆ

ಸಂತ ಫಿಲೋಮಿನಾ ಕಾಲೇಜಿನಲ್ಲಿ ರಾಷ್ಟ್ರೀಯ ಗಣಿತ ದಿನಾಚರಣೆ


ಪುತ್ತೂರು: ಇಲ್ಲಿನ ಸಂತ ಫಿಲೋಮಿನಾ ಕಾಲೇಜಿನ (ಸ್ವಾಯತ್ತ) ಸ್ನಾತಕೋತ್ತರ ಗಣಿತ ವಿಭಾಗವು ಡಿ.22 ರಂದು ರಾಷ್ಟ್ರೀಯ ಗಣಿತ ದಿನವನ್ನು ಆಚರಿಸಿತು. 


ಈ ಕಾರ್ಯಕ್ರಮವನ್ನು ಮಹಾನ್ ಭಾರತೀಯ ಗಣಿತಜ್ಞ ಶ್ರೀನಿವಾಸ ರಾಮಾನುಜನ್ ಅವರ ಜನ್ಮ ದಿನಾಚರಣೆಯ ಸ್ಮರಣಾರ್ಥವಾಗಿ ಆಯೋಜಿಸಲಾಗಿತ್ತು. ಇದರ ಭಾಗವಾಗಿ `Infinity and Insight: Ramanujan's Story' ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ರೆ. ಡಾ. ಆಂಟನಿ ಪ್ರಕಾಶ್ ಮೊಂಟೇರೊ ಮಾತನಾಡಿ, ವಿದ್ಯಾಭ್ಯಾಸದ ಜೊತೆಗೆ ವಿದ್ಯಾರ್ಥಿಗಳು ತಮ್ಮ ಆಸಕ್ತಿಗಳು ಹಾಗೂ ಪ್ರತಿಭೆಗಳನ್ನು ಅನ್ವೇಷಿಸುವ ಅಗತ್ಯವಿದೆ ಎಂದು ತಿಳಿಸಿದರು.

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿ ಉಪ್ಪಿನಂಗಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ಕಾರ್ತಿಕ್ ಕೆ. ಅವರು ಅರ್ಥಪೂರ್ಣ ಮತ್ತು ಪ್ರೇರಣಾದಾಯಕ ಉಪನ್ಯಾಸವನ್ನು ನೀಡಿ, ಪ್ರತಿಯೊಬ್ಬ ವ್ಯಕ್ತಿಯಲ್ಲೂ ವಿಶಿಷ್ಟವಾದ ಆಂತರಿಕ ಸಾಮರ್ಥ್ಯಗಳು ಮತ್ತು ಪ್ರತಿಭೆಗಳು ಅಡಗಿವೆ. ಅವುಗಳನ್ನು ಗುರುತಿಸಿ ಬೆಳೆಸಿದರೆ ಜೀವನದಲ್ಲಿ ಯಶಸ್ಸು ಸಾಧಿಸಬಹುದು ಎಂದು ಹೇಳಿದರು.

ಸ್ನಾತಕೋತ್ತರ ಗಣಿತ ವಿಭಾಗದ ಸಂಯೋಜಕ ಪ್ರೊ. ಗಣೇಶ್ ಭಟ್ ಕೆ. ಅವರು ಪರಿಚಯ ಭಾಷಣ ಮಾಡಿ, ಶ್ರೀನಿವಾಸ ರಾಮಾನುಜನ್ ಅವರ ಜೀವನಚರಿತ್ರೆ ಹಾಗೂ ಗಣಿತ ಕ್ಷೇತ್ರಕ್ಕೆ ನೀಡಿದ ಅಮೂಲ್ಯ ಕೊಡುಗೆಗಳನ್ನು ವಿವರಿಸಿದರು.

ಸೌಪರ್ಣಿಕಾ ಮತ್ತು ತಂಡದವರು ಪ್ರಾರ್ಥನೆ ನೆರವೇರಿಸಿದರು. ಗಣಿತದ ಮಹಾನ್ ಸಾಧಕರಾದ ಶ್ರೀನಿವಾಸ ರಾಮಾನುಜನ್ ಅವರ ಭಾವಚಿತ್ರಕ್ಕೆ ಗಣ್ಯರು ಪುಷ್ಪಾರ್ಚನೆ ಸಲ್ಲಿಸಿದರು.

ಎಂಎಸ್ಸಿ ಗಣಿತ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿನಿ ಅನುಪಮಾ ಟಿ. ಅವರು ಕಾರ್ಯಕ್ರಮವನ್ನು ನಿರೂಪಿಸಿದರು. ಸಫ್ರೀನಾ ಎಸ್. ಅವರು ಸ್ವಾಗಿತಿಸಿದರು. ಗನ್ಯಶ್ರೀ ವಂದಿಸಿದರು.

ಕಾರ್ಯಕ್ರಮದಲ್ಲಿ ಸ್ನಾತಕೋತ್ತರ ಗಣಿತ ವಿಭಾಗದ ವಿದ್ಯಾರ್ಥಿಗಳು, ಅಧ್ಯಾಪಕರು ಹಾಗೂ ಬಿಸಿಎ ವಿಭಾಗದ ಅಧ್ಯಾಪಕಿ ಸಮೀದಾ ಅವರು ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article