ಸಂತ ಫಿಲೋಮಿನಾ ಕಾಲೇಜಿನಲ್ಲಿ ಯಕ್ಷಧ್ರುವ: ಯಕ್ಷಗಾನ ವಿದ್ಯಾರ್ಥಿ ಸಮ್ಮಿಲನ

ಸಂತ ಫಿಲೋಮಿನಾ ಕಾಲೇಜಿನಲ್ಲಿ ಯಕ್ಷಧ್ರುವ: ಯಕ್ಷಗಾನ ವಿದ್ಯಾರ್ಥಿ ಸಮ್ಮಿಲನ


ಪುತ್ತೂರು: ಜ.11 ರಂದು ಸಂತ ಫಿಲೋಮಿನಾ ಕಾಲೇಜಿನ ರಜತ ಮಹೋತ್ಸವ ಸಭಾಂಗಣದಲ್ಲಿ ಭಾಗವತ ದಿನೇಶ್ ಅಮ್ಮಣ್ಣಾಯ ವೇದಿಕೆಯಲ್ಲಿ ಯಕ್ಷಧ್ರುವ ಪಟ್ಲ ಪೌಂಡೇಶನ್ ಟ್ರಸ್ಟ್ ಮಂಗಳೂರು, ಸಂತ ಫಿಲೋಮಿನಾ ಕಾಲೇಜು(ಸ್ವಾಯುತ್ತ) ಪುತ್ತೂರು, ಭಾರತೀಯ ಶಾಸ್ತ್ರೀಯ ಮತ್ತು ಜಾನಪದ ಕಲೆಗಳ ಅಧ್ಯಯನ  ಕೇಂದ್ರವಾದ ಯಕ್ಷ ಕಲಾ ಕೇಂದ್ರ ಹಾಗೂ ಯಕ್ಷಧ್ರುವ ಪಟ್ಲ ಫೌಂಡೇಶನ್ ಪುತ್ತೂರು ಮತ್ತು ಸುಳ್ಯ ಘಟಕಗಳ ಸಹಯೋಗದೊಂದಿಗೆ, ಸುಳ್ಯ ಮತ್ತು ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಯಕ್ಷಧ್ರುವ-ಯಕ್ಷಶಿಕ್ಷಣ ಯೋಜನೆಯ ವಿದ್ಯಾರ್ಥಿಗಳಿಂದ ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ 2025-26 ಯಕ್ಷಗಾನ ಪ್ರದರ್ಶನಗಳ ಮೂಲಕ ಸಂಪನ್ನಗೊಂಡಿತು. 


ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಿ, ಪಟ್ಲ ಫೌಂಡೇಶನ್ ಸಂಸ್ಥೆಯು ಹಿರಿಯರ ಮಾರ್ಗದರ್ಶನದಿಂದ ಯಕ್ಷಗಾನವನ್ನು ಉಚಿತವಾಗಿ ನೀಡುತ್ತಿರುವುದು ಶ್ಲಾಘಿನೀಯ, ವಿಶೇಷ ಸಾಂಸ್ಕ್ರತಿಕ ಅಸ್ಮಿತೆಯನ್ನು ಪಡೆದಿರುವ ಯಕ್ಷಗಾನ ಕಲೆಯನ್ನು ಉಳಿಸಿ ಬೆಳೆಸಬೇಕಾಗಿದೆ ಎಂದು ಹೇಳಿದರು.


ಪ್ರಾಸ್ತಾವಿಕವಾಗಿ ಮಾತನಾಡಿದ ಯಕ್ಷಧ್ರುವ ಪಟ್ಲ ಫೌಂಡೇಶನ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಅವರು, ‘ಸಂತ ಫಿಲೋಮಿನಾ ಕಾಲೇಜಿನ ಯಕ್ಷಕಲಾ ಕೇಂದ್ರದ ಚಟುವಟಿಕೆಗಳನ್ನು ಬೆಳೆಸುವ ಬದ್ಧತೆಯನ್ನು ತೋರುವ ಪ್ರಾಂಶುಪಾಲರಾದ ರೆ.ಡಾ. ಆಂಟೋನಿ ಪ್ರಕಾಶ್ ಮೊಂತೇರೊರವರವನ್ನು ಅಭಿನಂದಿಸಿದರು. ಕಾರ್ಯಕ್ರಮವನ್ನು ಸಂಯೋಜಿಸಲು ಸಹಕರಿಸಿದ ಯಕ್ಷಧ್ರುವ ಪಟ್ಲ ಫೌಂಡೇಶನ್ ಸುಳ್ಯ ಮತ್ತು ಪುತ್ತೂರು ಘಟಕಗಳಿಗೆ ಕೃತಜ್ಞತೆ ಸಲ್ಲಿಸಿದರು.


300 ವಿದ್ಯಾರ್ಥಿಗಳು ಶ್ರೇಷ್ಠ ಮಟ್ಟದ ಯಕ್ಷಗಾನ ಪ್ರದರ್ಶನವನ್ನು ನೀಡಿದರು. ಅಧ್ಯಕ್ಷತೆಯನ್ನು ಸುಳ್ಯ ಘಟಕದ ಗೌರವಾಧ್ಯಕ್ಷ ದಯಕರ ಆಳ್ವ ವಹಿಸಿದರು.


ವೇದಿಕೆಯಲ್ಲಿ ಯಕ್ಷ ಶಿಕ್ಷಣ ಪ್ರಧಾನ ಸಂಚಾಲಕರಾದ  ಪಣಂಬೂರು ವಾಸುದೇವ ಐತಾಳ, ಪುತ್ತೂರು ಘಟಕದ ಗೌರವಾಧ್ಯಕ್ಷರಾದ ಸವಣೂರು ಸೀತಾರಾಮ ರೈ, ಉದ್ಯಮಿ ಮಿಥುನ್ ಶೆಣೈ ಬೆಳ್ಳಾರೆ, ಸಂತ ಫಿಲೋಮಿನಾ ಕಾಲೇಜು ಪರಿಕ್ಷಾಂಗ ಕುಲಸಚಿವರಾದ ಡಾ. ವಿನಯಚಂದ್ರ, ಮಾತೃ ಘಟಕದ ಪ್ರದಾನ ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ, ಕೋಶಾಧಿಕಾರಿ ಸುದೇಶ್ ಕುಮಾರ್ ರೈ, ಪುತ್ತೂರು ಘಟಕದ ಅಧ್ಯಕ್ಷರಾದ ಕರುಣಾಕರ ರೈ ದೇರ್ಲ ಉಪಸ್ಥಿತರಿದ್ದರು. ದೀವಿತ್ ಎಸ್.ಕೆ. ಪೆರಾಡಿ ಸಂಯೋಜಕರು, ಯಕ್ಷಧ್ರುವ ಯಕ್ಷಶಿಕ್ಷಣ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಸಮರೋಪ ಸಮಾರಂಭದಲ್ಲಿ ಪುತ್ತೂರಿನ ಜನಪ್ರಿಯ ಶಾಸಕ ಅಶೋಕ ಕುಮಾರ್ ರೈಯವರು ಭಾಗವಹಿಸಿ ವಿದ್ಯಾರ್ಥಿಗಳಲ್ಲಿ ಸ್ಪೂರ್ತಿ ತುಂಬಿದರು. ಕಾಲೇಜಿನ ಸಂಚಲಕರಾದ ಅತೀವಂ ಲಾರೆನ್ಸ್ ಮಸ್ಕರೇನಸ್, ಪ್ರಾಂಶುಪಾಲರಾದ ರೆ.ಡಾ. ಆಂಟೊನಿ ಪ್ರಕಾಶ್ ಮೊಂತೇರೇರವರು ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.

ಪ್ರಾಂಶುಪಾಲರು, ರಚನಾತ್ಮಕ ಮತ್ತು ವಿದ್ಯಾರ್ಥಿಗಳ ಬೆಳವಣಿಗೆಗೆ ಪೂರಕವಾದ ಕಾರ್ಯಕ್ರಮದ ಸಹಯೋಗ ನೀಡಿದಕ್ಕಾಗಿ, ಪಟ್ಲ ಸತೀಶ್ ಶೆಟ್ಟಿಯವರಿಗೆ ಮತ್ತು ಸಮಸ್ತ ಪಟ್ಲ ಫೌಂಡೇಷನ್ ಯಕ್ಷಶಿಕ್ಷಣ ಬಳಗಕ್ಕೆ ಕೃತಜ್ಞತೆ ಸಲ್ಲಿಸಿದರು.

ಅಧ್ಯಕ್ಷತೆಯನ್ನು ವಹಿಸಿದ ಪುತ್ತೂರು ಘಟಕದ ಅಧ್ಯಕ್ಷರಾದ ಕರುಣಾಕರ ರೈ ದೇರ್ಲರವರು ಯಕ್ಷಶಿಕ್ಷಣ ಕಾರ್ಯಕ್ರಮ ನಿರಂತರವಾಗಿ ನಡೆಯಲಿ ಎಂದು ಹಾರೈಸಿದರು. ಪೂರ್ವಧ್ಯಕ್ಷರಾದ ಜೈರಾಜ್ ಭಂಡಾರಿ, ಟ್ರಸ್ಟಿ ಶ್ರೀ ಅರಿಯಡ್ಕ ಚಿಕ್ಕಪ್ಪ್ ನಾಯ್ಕ್ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.

ಸಂತ ಫಿಲೋಮಿನಾ ಕಾಲೇಜಿನ ಪರಿಕ್ಷಾಂಗ ಕುಲಸಚಿವರಾದ ಡಾ. ವಿನಯಚಂದ್ರರವರು ಯಕ್ಷ ಶಿಕ್ಷಣ ಯೋಜನೆ ಭವಿಷ್ಯದಲ್ಲಿ ಕಲೆಯ ವಿಸ್ತಾರಕ್ಕೆ ಪ್ರೇರಕ ಎಂದು ಹೇಳಿದರು. ಸಂತ ಫಿಲೋಮಿನಾ ಕಾಲೇಜು ಯಕ್ಷ ಕಲಾ ಕೇಂದ್ರದ ಕಾರ್ಯ ಚಟುವಟಿಕೆಗಳನ್ನು ವಿದ್ಯಾರ್ಥಿಗಳು ಸಮರ್ಪಕವಾಗಿ ಬೆಳೆಸುವಂತೆ ತಿಳಿಸಿದರು.

ಯಕ್ಷಕಲಾ ಕೆಂದ್ರ ನಿರ್ದೇಶಕ, ಉಪನ್ಯಾಸಕರಾದ ಪ್ರಶಾಂತ್ ರೈ ಕಾರ್ಯಕ್ರಮ ನಿರ್ವಹಿಸಿದರು. ಯಕ್ಷ ಶಿಕ್ಷಣ ಸಂಯೋಜಕಾರದ ದೀವಿತ್ ಎಸ್.ಕೆ ಪೆರಾಡಿ ವಂದಿಸಿದರು. ಪ್ರೊ. ದತ್ತಾತ್ರೇಯ ರಾವ್ ಅವರು ಪ್ರಾರ್ಥಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article