ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಪಿಆರ್‌ಒ ಭಾರತಿ ಎಸ್ ರೈ ಅವರಿಗೆ ಪಿಹೆಚ್‌ಡಿ ಪದವಿ
ಅವರಿಗೆ ಶ್ರೀನಿವಾಸ ವಿಶ್ವವಿದ್ಯಾನಿಲಯದ ಸಂಶೋಧನಾ ಪ್ರಾಧ್ಯಾಪಕಿ ಡಾ. ಮಂಜುಳಾ ಕೆ.ಟಿ. ಇವರು ಮಾರ್ಗದರ್ಶನ ನೀಡಿರುತ್ತಾರೆ.
ಸಂಶೋಧನೆ ನಡೆಸುತ್ತಿದ್ದ ಸಂದರ್ಭದಲ್ಲಿ ಅವರು ಹನ್ನೆರಡು ಸಂಶೋಧನಾ ಲೇಖನಗಳನ್ನು ರಾಷ್ಟ್ರೀಯ ಹಾಗೂ ಅಂತ ರಾಷ್ಟ್ರೀಯ ಪೀರ್-ರಿವ್ಯೂಡ್ ಸಂಶೋಧನಾ ನಿಯತಕಾಲಿಕಗಳಲ್ಲಿ(Peer Reviewed) ಪ್ರಕಟಿಸಿದ್ದಾರೆ, ಮಾತ್ರವಲ್ಲದೆ ಅವರು 3 ರಾಷ್ಟ್ರ ಮಟ್ಟದ ಸಮ್ಮೇಳನಗಳಲ್ಲಿ ಸಂಶೋಧನಾ ಪ್ರಬಂಧಗಳನ್ನು ಮಂಡಿಸಿರುತ್ತಾರೆ.
ಇಂಗ್ಲಿಷ್ ಸಾಹಿತ್ಯದಲ್ಲಿ ಎಂ.ಎ. ಎಂ.ಫಿಲ್. ಹಾಗೂ ಕಾನೂನು ಪದವೀಧರೆಯಾಗಿರುವ ಇವರು ಪ್ರಸ್ತುತ ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಇಂಗ್ಲೀಷ್ ವಿಭಾಗದ ಮುಖ್ಯಸ್ಥೆ ಹಾಗೂ ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಇವರ ಈ ಸಾಧನೆಗೆ ಸಂಸ್ಥೆಯ ಸಂಚಾಲಕರಾದ ಅತೀ ವಂದನೀಯ ಲಾರೆನ್ಸ್ ಮಸ್ಕರೇನ್ಹಾಸ್ ಅವರು ಹಾಗೂ ಪ್ರಾಚಾರ್ಯರಾದ ವಂ. ಡಾ.ಆಂಟನಿ ಪ್ರಕಾಶ್ ಮೊಂತೆರೊ ಅವರು ಅಭಿನಂದಿಸಿದ್ದಾರೆ.
ಶೈಕ್ಷಣಿಕ ಪ್ರಯಾಣದುದ್ದಕ್ಕೂ ಅವರಿಗೆ ಪ್ರೋತ್ಸಾಹ ನೀಡಿದ ಸಂಸ್ಥೆಯ ಪ್ರಾಚಾರ್ಯರುಗಳು, ಮಾರ್ಗದರ್ಶಕರಾದ ಡಾ. ಮಂಜುಳಾ ಕೆ.ಟಿ. ಅವರು, ಸಹೋದ್ಯೋಗಿಗಳು, ವಿದ್ಯಾರ್ಥಿಗಳು ಮತ್ತು ಕುಟುಂಬದ ಸದಸ್ಯರು ಶುಭಕೋರಿದ್ದಾರೆ.