ಪಾಜಕ ಆನಂದತೀರ್ಥ ವಿದ್ಯಾಲಯ: ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಪ್ರಮಾಣಪತ್ರ ಹಸ್ತಾಂತರ

ಪಾಜಕ ಆನಂದತೀರ್ಥ ವಿದ್ಯಾಲಯ: ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಪ್ರಮಾಣಪತ್ರ ಹಸ್ತಾಂತರ


ಶಿರ್ವ: ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ನಲ್ಲಿ ಇತ್ತೀಚೆಗೆ ಸ್ಥಾನ ಪಡೆದಿರುವ ಪಾಜಕ ಅನಂದತೀರ್ಥ ವಿದ್ಯಾಲಯಕ್ಕೆ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಪ್ರಮಾಣಪತ್ರವನ್ನು ಅಧಿಕೃತವಾಗಿ ಹಸ್ತಾಂತರಿಸಲಾಯಿತು.

ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ನ ಏಷ್ಯಾ ವಲಯದ ಮುಖ್ಯಸ್ಥ ಡಾ. ಮಣಿಶ್ ವಿಷ್ಣೋಯಿ ಹಾಗೂ ಅಧಿಕಾರಿ ಯಶವಂತ್ ಅವರು ಸಂಸ್ಥೆಯ ಪ್ರಾಂಶುಪಾಲೆ ಡಾ. ಗೀತಾ ಶಶಿಧರ್ ಅವರಿಗೆ ಪ್ರಮಾಣಪತ್ರ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಡಾ. ಮಣಿಶ್ ವಿಷ್ಣೋಯಿ ಅವರು ಧಾರ್ಮಿಕ ಶಿಕ್ಷಣಕ್ಕಾಗಿ ಪ್ರತ್ಯೇಕ ವಿಭಾಗವನ್ನು ಸ್ಥಾಪಿಸಿರುವುದಕ್ಕೆ ಶಾಲಾ ಆಡಳಿತವನ್ನು ಶ್ಲಾಘಿಸಿ, ಸಂಸ್ಥೆಗೆ ಅಭಿನಂದನೆ ಸಲ್ಲಿಸಿದರು. ಮುಂದಿನ ವರ್ಷಗಳಲ್ಲಿ ಇನ್ನೂ ಅನೇಕ ದಾಖಲೆಗಳನ್ನು ಸಾಧಿಸುವಂತಾಗಲಿ ಎಂದು ಶುಭವನ್ನು ಹಾರೈಸಿದರು.

ಕಳೆದ ಡಿ.7 ರಂದು ಆನಂದ ತೀರ್ಥ ವಿದ್ಯಾಲಯದಲ್ಲಿ 4,000ಕ್ಕೂ ಅಧಿಕ ಮಂದಿ ಭಗವದ್ಗೀತೆಯ 15ನೇ ಅಧ್ಯಾಯ ‘ಪುರುಶೋತ್ತಮ ಯೋಗ’ದ ಸಾಮೂಹಿಕ ಪಠಣದ ಮೂಲಕ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ನಲ್ಲಿ ದಾಖಲೆಯೊಂದನ್ನು ಸ್ಥಾಪಿಸುವ ಪ್ರಯತ್ನ ಮಾಡಿತ್ತು. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪೋಷಕರನ್ನು ಒಳಗೊಂಡಂತೆ 4,000ಕ್ಕೂ ಹೆಚ್ಚು ಮಂದಿ ಉತ್ಸಾಹದಿಂದ ಭಾಗವಹಿಸಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article