ಸುಬ್ರಹ್ಮಣ್ಯ ಗ್ರಾಮ ಪಂಚಾಯಿತಿಗೆ ಎಂಎಲ್‌ಸಿ ಮಂಜುನಾಥ್ ಭಂಡಾರಿ ಭೇಟಿ

ಸುಬ್ರಹ್ಮಣ್ಯ ಗ್ರಾಮ ಪಂಚಾಯಿತಿಗೆ ಎಂಎಲ್‌ಸಿ ಮಂಜುನಾಥ್ ಭಂಡಾರಿ ಭೇಟಿ


ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಕಚೇರಿಗೆ ಕರ್ನಾಟಕ ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಸೋಮವಾರ ಸಂಜೆ ಭೇಟಿ ನೀಡಿ ಸದಸ್ಯರುಗಳು, ಅಧಿಕಾರಿ ವರ್ಗದವರನ್ನ ಹಾಗೂ ಜನಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದರು. 

ಗ್ರಾಮ ಪಂಚಾಯತಿನ ಅಧ್ಯಕ್ಷರು, ಉಪಾಧ್ಯಕ್ಷ ಸದಸ್ಯರುಗಳು ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿಗಳ ಜವಾಬ್ದಾರಿಗಳನ್ನ ಏನೆಂದು ವಿವರವಾಗಿ ತಿಳಿಸಿದರು, ಅಲ್ಲದೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಗ್ರಾಮ ಲೆಕ್ಕಾಧಿಕಾರಿಯವರನ್ನು ಪಂಚಾಯಿತಿಗೆ ಬರಬೇಕಾದ ಸಂಪನ್ಮೂಲಗಳನ್ನ ಕ್ರೂಡೀಕರಿಸುವುದರೊಂದಿಗೆ ಹೆಚ್ಚು ಹೆಚ್ಚು ಅಭಿವೃದ್ಧಿ ಕೆಲಸಗಳನ್ನು ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಸದಸ್ಯರೊಂದಿಗೆ ಸಮಾಲೋಚಿಸಿಕೊಂಡು ಮಾಡಬೇಕೆಂಬುದಾಗಿ ತಿಳಿಸಿದರು. 

ಒಂದು ಗ್ರಾಮ ಪಂಚಾಯತ್ ಅಂದಮೇಲೆ ಅಲ್ಲಿ ಬೇರೆ ಬೇರೆ ಕಚೇರಿಗಳು, ವಿಶಾಲವಾದ ಸಭಾಂಗಣ,ಕಂಪ್ಯೂಟರ್ ಕೊಠಡಿ, ಗ್ರಂಥಾಲಯ ಇತ್ಯಾದಿಗಳನ್ನ ಒಳಗೊಂಡಿರಬೇಕು. ಸಾರ್ವಜನಿಕರು ಯಾವ ಹೊತ್ತಿಗೆ ಬೇಕಾದರೂ ಬಂದು ತಮ್ಮ ಕುಂದು ಕೊರತೆಗಳನ್ನ ನಿವಾರಿಸಿಕೊಳ್ಳಬಹುದು. ಈ ನಿಟ್ಟಿನಲ್ಲಿ ಅಧಿಕಾರಿ ವರ್ಗದವರು ಹಾಗೂ ಸಿಬ್ಬಂದಿಯವರು ಗ್ರಾಮ ಪಂಚಾಯಿತಿಗೆ ಬಂದ ಗ್ರಾಮದ ಜನರನ್ನ ವಿಚಾರಿಸಿ ಅವರಿಗೆ ಬೇಕಾದ ಸಲಹೆ ಸೂಚನೆಗಳನ್ನು ನೀಡುವುದು ಅತ್ಯಗತ್ಯ ಎಂದರು.

ಯಾವುದೇ ಕಚೇರಿ ಕೆಲಸ ಕಾರ್ಯಗಳನ್ನು ಕ್ಲಪ್ತ ಸಮಯದಲ್ಲಿ ಸಾರ್ವಜನಿಕರಿಗೆ ತೊಂದರೆ ಆಗದಂತೆ ಮಾಡಿಕೊಡಬೇಕೆಂದು ತಾಕಿತು ಹಾಕಿದರು. ಹಾಗೆ ನಾನು ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ ಆದ್ದರಿಂದ ಸರ್ಕಾರದಿಂದ ದೊರಕು ಅನುದಾನವನ್ನು ದೊರಕಿಸಿಕೊಡುವಲ್ಲಿ ಪ್ರಯತ್ನವನ್ನು ಪಡುತ್ತೇನೆ. ಗ್ರಾಮ ಪಂಚಾಯತ್ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಸದಸ್ಯರುಗಳು ತಮ್ಮ ಗ್ರಾಮ ಪಂಚಾಯಿತಿಗೆ ಸೇರಿದ ಆಸ್ತಿಗಳನ್ನ ರಕ್ಷಣೆ ಮಾಡಿ, ಅಭಿವೃದ್ಧಿಗೊಳಿಸಿ,ಆರ್ಥಿಕ ಕ್ರೂರೀಕರಣ ಮಾಡಿಕೊಂಡು ಅಭಿವೃದ್ಧಿ ಕಾರ್ಯಗಳನ್ನು ಮಾಡಬೇಕೆಂದು ತಿಳಿಸಿದರು.

ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷೇ ಸುಜಾತ ಕಲ್ಲಾಜೆ ಅಧ್ಯಕ್ಷತೆ ವಹಿಸಿದ್ದರು. 

ಕಡಬ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ನವೀನ್ ಬಂಡಾರಿ, ಕಡಬ ತಾಲೂಕು ಪಂಚ ಗ್ಯಾರೆಂಟಿ ಯೋಜನೆ ಅಧ್ಯಕ್ಷ ಸುದೀರ್ ಕುಮಾರ್ ಶೆಟ್ಟಿ, ಪಂಚಾಯತ್ ಸದಸ್ಯ ಹರೀಶ್ ಇಂಜಾಡಿ, ಪಿಡಿಓ ಮಹೇಶ್, ಕಾರ್ಯದರ್ಶಿ ಮೋನಪ್ಪ ಡಿ, ಕಡಬ ತಾಲೂಕು ಕಂದಾಯ ನಿರೀಕ್ಷಕ ಪೃಥ್ವಿರಾಜ್ ಮತ್ತಿತರರು ಉಪಸ್ಥಿತರಿದ್ದರು. 

ಈ ಸಂದರ್ಭದಲ್ಲಿ ಸುಬ್ರಮಣ್ಯ ಗ್ರಾಮ ಪಂಚಾಯತ್ ಸದಸ್ಯರುಗಳು, ಸ್ಥಳೀಯ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಹಾಜರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article