ಪರೀಕ್ಷಾ ಭಯ ನಿವಾರಣೆ ಮಾನಸಿಕ ಒತ್ತಡ ಕುರಿತು ತರಬೇತಿ
Sunday, January 4, 2026
ಸುಬ್ರಹ್ಮಣ್ಯ: ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷಾ ಭಯ ನಿವಾರಣೆ ಹಾಗೂ ಮಾನಸಿಕ ಒತ್ತಡ ನಿರ್ವಹಣೆ ಕುರಿತು ಶನಿವಾರ ತರಬೇತಿ ಕಾರ್ಯಕ್ರಮ ನಡೆಯಿತು.
ತರಬೇತಿಯನ್ನು ಡಾ. ಗ್ರೀಷ್ಮ ಅವರು ನಡೆಸಿಕೊಟ್ಟರು. ಈ ಕಾರ್ಯಕ್ರಮವನ್ನು ರೋಟರಿ ಕ್ಲಬ್ ಸುಬ್ರಹ್ಮಣ್ಯದ ವತಿಯಿಂದ ಆಯೋಜಿಸಲಾಗಿತ್ತು.
ಸುಬ್ರಹ್ಮಣ್ಯ ರೋಟರಿ ಕ್ಲಬ್ ಅಧ್ಯಕ್ಷ ಜಯಪ್ರಕಾಶ್, ಶಾಲಾ ಮುಖ್ಯ ಶಿಕ್ಷಕಿ ನಂದ ಹರೀಶ್, ಹಿರಿಯ ಸಹ ಶಿಕ್ಷಕ ಕೃಷ್ಣ ಭಟ್ ಉಪಸ್ಥಿತರಿದ್ದರು.