ಸುಬ್ರಹ್ಮಣ್ಯದ ಯುವಕ ಬೈಕ್ ಅಪಘಾತದಲ್ಲಿ ಮೃತ್ಯು

ಸುಬ್ರಹ್ಮಣ್ಯದ ಯುವಕ ಬೈಕ್ ಅಪಘಾತದಲ್ಲಿ ಮೃತ್ಯು


ಸುಬ್ರಮಣ್ಯ: ಸುಬ್ರಹ್ಮಣ್ಯ ಗ್ರಾಮದ ಕುಲ್ಕುಂದ ಬೀಡಿನಗದ್ದೆ ನಿವಾಸಿ ಉಡುಪಿ ಸಮೀಪದ ಉದ್ಯಾವರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ಢಿಕ್ಕಿ ಹೊಡೆದು ಮೃತಪಟ್ಟ ಘಟನೆ ಜ.1 ರಂದು ರಾತ್ರಿ ವರದಿಯಾಗಿದೆ.

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೇತುವೆಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಯುವರಾಜ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ನಸುಕಿನ ವೇಳೆ 2.30ರ ಸುಮಾರಿಗೆ ಘಟನೆ ನಡೆದಿದೆ ಎನ್ನಲಾಗಿದ್ದು, ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಉಚ್ಚಿಲದ ಅಂಬ್ಯೂಲೆನ್ಸ್ ಒಂದರಲ್ಲಿ ಅಜ್ಜರಕಾಡು ಆಸ್ಪತ್ರೆಗೆ ಸಾಗಿಸಲಾಗಿದ್ದು, ಶವಗಾರದಲ್ಲಿ ಇರಿಸಲಾಗಿದೆ ಎಂದು ತಿಳಿದು ಬಂದಿದೆ.

ಮೃತರು ತಂದೆ ಜನಾರ್ದನ, ತಾಯಿ, ಸಹೋದರ ಕುಟುಂಬಸ್ಥರು ಮತ್ತು ಬಂಧುಗಳನ್ನು ಅಗಲಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article