ಡಾ. ಎನ್. ವಿನಯ ಹೆಗ್ಡೆ ನಿಧನಕ್ಕೆ ಹೆಗ್ಗಡೆ ಸಂತಾಪ

ಡಾ. ಎನ್. ವಿನಯ ಹೆಗ್ಡೆ ನಿಧನಕ್ಕೆ ಹೆಗ್ಗಡೆ ಸಂತಾಪ

ಉಜಿರೆ: ನಿಟ್ಟೆ ಶಿಕ್ಷಣ ಸಂಸ್ಥೆಗಳ ಸಮೂಹ ಅಧ್ಯಕ್ಷರಾದ ಡಾ. ಎನ್. ವಿನಯ ಹೆಗ್ಡೆ ಅವರ ನಿಧನ ಸುದ್ದಿ ತಿಳಿದು ವಿಷಾದವಾಯಿತು.

ಶಿಕ್ಷಣ ತಜ್ಞರಾಗಿ, ಖ್ಯಾತ ಉದ್ಯಮಿಯಾಗಿ, ಕ್ರೀಡಾಪ್ರೇಮಿಯಾಗಿ, ಸಮಾಜಸೇವಕರಾಗಿ, ದಕ್ಷ ಆಡಳಿತದಾರರಾಗಿ ಅವರು ಉತ್ತಮ ಸೇವೆ ನೀಡಿದ್ದಾರೆ. ಉತ್ತಮ ವ್ಯಕ್ತಿತ್ವವನ್ನು ಹೊಂದಿದ್ದ ಅವರು ತಮ್ಮ ದಕ್ಷ ನಾಯಕತ್ವದಲ್ಲಿ ತಾವು ಬೆಳೆಯುವುದರೊಂದಿಗೆ ಇತರರಿಗೂ ಪ್ರೋತ್ಸಾಹ ನೀಡಿದ್ದಾರೆ.

ಅನೇಕ ಸಮಾರಂಭಗಳಲ್ಲಿ ನಾವು ಜೊತೆಯಾಗಿ ವೇದಿಕೆಯಲ್ಲಿ ಭಾಗವಹಿಸಿದ್ದೇವೆ. ನಮ್ಮ ಕ್ಷೇತ್ರದ ಅಪಾರ ಅಭಿಮಾನಿಯೂ, ಭಕ್ತರೂ ಆಗಿದ್ದ ಅವರು ಸ್ನೇಹಜೀವಿಯಾಗಿ, ಆದರ್ಶ ಸಮಾಜಸೇವಕರಾಗಿ ಚಿರಪರಿಚಿತರಾಗಿದ್ದರು.

ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತಾ, ಅವರ ಅಗಲುವಿಕೆಯಿಂದ ಕುಟುಂಬವರ್ಗದವರಿಗೆ ಉಂಟಾದ ದುಃಖವನ್ನು ಸಹಿಸುವ ಶಕ್ತಿ-ತಾಳ್ಮೆಯನ್ನಿತ್ತು ಶ್ರೀ ಮಂಜುನಾಥ ಸ್ವಾಮಿ ಹರಸಲೆಂದು ಪ್ರಾರ್ಥಿಸುತ್ತೇನೆ ಎಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರು ಸಂತಾಪ ಸೂಚಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article