ರಾಜ್ಯಮಟ್ಟದ ಮಹಿಳಾ ನೆಟ್ ಬಾಲ್ ಪಂದ್ಯಾಟ: ಉಜಿರೆ ಎಸ್‌ಡಿಎಂ ತಂಡ ಪ್ರಥಮ

ರಾಜ್ಯಮಟ್ಟದ ಮಹಿಳಾ ನೆಟ್ ಬಾಲ್ ಪಂದ್ಯಾಟ: ಉಜಿರೆ ಎಸ್‌ಡಿಎಂ ತಂಡ ಪ್ರಥಮ


ಉಜಿರೆ: ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ಒಲಿಂಪಿಕ್ಸ್ ಸಂಸ್ಥೆ ಸೇರಿದಂತೆ ತುಮಕೂರು ಜಿಲ್ಲಾಡಳಿತದ ಸಹಯೋಗದಲ್ಲಿ ತುಮಕೂರು ಜಿಲ್ಲೆಯ ಮಹಾತ್ಮಾಗಾಂಧಿ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ‘ಕರ್ನಾಟಕ ಕ್ರೀಡಾಕೂಟ-2026’ ರಾಜ್ಯ ಮಟ್ಟದ ಮಹಿಳೆಯರ ನೆಟ್ ಬಾಲ್ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜಿನ ತಂಡ ಪ್ರಥಮ ಸ್ಥಾನ ಪಡೆದು ಪಂದ್ಯಾಟದ ಚಾಂಪಿಯನ್ ಸ್ಥಾನ ಪಡೆದಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿ, ಪಂದ್ಯಾಟದಲ್ಲಿ ಉತ್ತಮ ಪ್ರದರ್ಶನ ನೀಡಿದ ತಂಡದಲ್ಲಿ ಉಜಿರೆ ಎಸ್.ಡಿ.ಎಂ ಕಾಲೇಜಿನ ವಿದ್ಯಾರ್ಥಿಗಳಾದ ವರ್ಷಿತ, ರಶ್ಮಿ, ಸುರಕ್ಷಾ, ಪಲ್ಲವಿ, ಧನುಶ್ರೀ, ಪೂಜಾ, ಭೂಮಿಕ, ಸಹನಾ, ಸುಪ್ರಿಯ ಹಾಗೂ ದೀಪಿಕಾ ಭಾಗವಹಿಸಿದ್ದರು.

ಪ್ರಶಸ್ತಿ ವಿಜೇತ ತಂಡಕ್ಕೆ ಎಸ್.ಡಿ.ಎಂ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಸುದೀನ್ ತರಬೇತಿ ನೀಡಿದ್ದಾರೆ. ವಿಜೇತ ತಂಡಕ್ಕೆ ಎಸ್.ಡಿ.ಎಂ ಆಡಳಿತ ಮಂಡಳಿ ಸೇರಿದಂತೆ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್, ಕಾಲೇಜಿನ ಪ್ರಾಚಾರ್ಯ ಪ್ರೊ. ವಿಶ್ವನಾಥ್ ಪಿ, ಪ್ರಮೋದ್ ಕುಮಾರ್ ಬಿ. ಕ್ರೀಡಾ ಸಂಘದ ಕಾರ್ಯದರ್ಶಿ ರಮೇಶ್, ದೈಹಿಕ ಶಿಕ್ಷಣ ಉಪನ್ಯಾಸಕ ಮತ್ತು ತರಬೇತುದಾರ ಸುದೀನ್ ಪೂಜಾರಿ, ವಿದ್ಯಾರ್ಥಿಗಳು, ಪೋಷಕರು ಸೇರಿದಂತೆ ಸಿಬ್ಬಂದಿ ವರ್ಗದವರು ಅಭಿನಂದನೆ ತಿಳಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article