ಎಸ್.ಡಿ.ಎಂ ಶಾಲೆ: ವಿದ್ಯಾರ್ಥಿನಿ ಅನೀಶ ಆರೋಲ್ ಡಿಸೋಜಾ ರಾಜ್ಯ ಮಟ್ಟದದಲ್ಲಿ ಪ್ರಥಮ
ರಾಜ್ಯ ಮಟ್ಟದ ಕಿಡ್ಸ್ ಅಥ್ಲೆಟಿಕ್ಸ್‌ನಲ್ಲಿ ಚಾಂಪಿಯನ್: ಮಿನಿ ಒಲಿಂಪಿಕ್ಸ್ ಅಥ್ಲೆಟಿಕ್ಸ್ ಕ್ರೀಡಾ ಕೂಟಕ್ಕೆ ಆಯ್ಕೆ
ಚಿಕ್ಕಮಗಳೂರು ಜಿಲ್ಲೆಯ ಬಸರಿಕಟ್ಟೆಯ ಕ್ಲೆಮೆಂಟ್ ಡಿಸೋಜಾ ಮತ್ತು ಆಶಾ ಡಿಸೋಜಾ ದಂಪತಿಗಳ ಮಗಳಾದ ಅನೀಶ ಡಿಸೋಜಾ ಕಳೆದ ಎರಡು ವರ್ಷ ಸತತವಾಗಿ ಜಾರ್ಖಂಡ್ ಹಾಗೂ ಲಕ್ನೋದಲ್ಲಿ ನಡೆದ ಅಂಡರ್ 14 ವಿಭಾಗದ ರಾಷ್ಟ್ರ ಮಟ್ಟದ ಗುಂಡು ಎಸೆತದಲ್ಲಿ ಭಾಗವಹಿಸಿ 4ನೇ ಸ್ಥಾನವನ್ನು ಪಡೆದಿರುತ್ತಾಳೆ. ಜೊತೆಗೆ ಎರಡು ಭಾರಿ ರಾಜ್ಯ ಮಟ್ಟದ ಚಕ್ರ ಎಸೆತದಲ್ಲಿ ಭಾಗವಹಿಸಿರುತ್ತಾರೆ.
ಪ್ರಶಸ್ತಿ ವಿಜೇತ ಅನೀಶರವರಿಗೆ ಉಜಿರೆಯ ಎಸ್.ಡಿ.ಎಂ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ದೈಹಿಕ ಶಿಕ್ಷಕ ಸುಭಾಶ್ಚಂದ್ರ ಕೆ. ತರಬೇತಿಯನ್ನು ನೀಡಿರುತ್ತಾರೆ. ವಿದ್ಯಾರ್ಥಿನಿಗೆ ಎಸ್.ಡಿ.ಎಂ ಆಡಳಿತ ಮಂಡಳಿ ಸೇರಿದಂತೆ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್., ಶಾಲೆಯ ಮುಖ್ಯ ಶಿಕ್ಷಕಿ ವಿದ್ಯಾ ಲಕ್ಷ್ಮಿ, ಎಸ್.ಡಿ.ಎಂ ಕ್ರೀಡಾ ಸಂಘದ ಕಾರ್ಯದರ್ಶಿ ರಮೇಶ್, ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರು ಸೇರಿದಂತೆ ಸಿಬ್ಬಂದಿವರ್ಗದವರು ಅಭಿನಂದನೆಗಳನ್ನು ತಿಳಿಸಿರುತ್ತಾರೆ.
