ಮತದಾನ ನಮ್ಮೆಲ್ಲರ ಜವಾಬ್ದಾರಿ ಮತ್ತು ಕರ್ತವ್ಯ: ಡಾ. ಶ್ರೀಧರ್ ಭಟ್
ಕಾರ್ಯಕ್ರಮದದಲ್ಲಿ ಅತಿಥಿಗಳಾಗಿದ್ದ ಕಾಲೇಜಿನ ಆಡಳಿತ ವಿಭಾಗದ ಕುಲಸಚಿವ ಡಾ. ಶ್ರೀಧರ್ ಎನ್. ಭಟ್ ಮಾತನಾಡಿ, ರಾಷ್ಟ್ರ ನಿರ್ಮಾಣಕ್ಕಾಗಿ ಮತ ಚಲಾಯಿಸುವುದು ನಮ್ಮೆಲ್ಲರ ಜವಾಬ್ದಾರಿ. 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಕಡ್ಡಾಯವಾಗಿ ಮತ ಚಲಾಯಿಸಬೇಕು. ಇಂದಿನ ಯುವ ಪೀಳಿಗೆಯೇ ಮುಂದಿನ ಭಾರತವನ್ನು ಕಟ್ಟುವ ಶಕ್ತಿಯಾಗಿರುವುದರಿಂದ, ನಿರ್ಮಾಣ ಕಾರ್ಯದಲ್ಲಿ ನಾವೆಲ್ಲರೂ ಕೈಜೋಡಿಸಬೇಕು. ನಮ್ಮ ದೇಶ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವವಾಗಿರುವುದಕ್ಕೆ ಮುಖ್ಯ ಕಾರಣವೇ ಮತದಾನ ವ್ಯವಸ್ಥೆಯಾಗಿದ್ದು, ಮತದಾನದ ಮಹತ್ವವನ್ನು ನಾವೆಲ್ಲ ಅರಿತುಕೊಳ್ಳಬೇಕು ಎಂದರು.
ರಾಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ಕಾಲೇಜಿನ ಎಲ್ಲಾ ತರಗತಿಗಳಿಗೆ ತೆರಳಿ ಮತದಾನದ ಬಗ್ಗೆ ಪ್ರತಿಜ್ಞಾವಿಧಿಯನ್ನು ಬೋಧಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಉಪ ಪ್ರಾಚಾರ್ಯ ನಂದಕುಮಾರಿ, ರಿಜಿಸ್ಟ್ರಾರ್ ಇ.ವಿ. ಗಣೇಶ್ ನಾಯಕ್, ಐ.ಕ್ಯೂ.ಎ.ಸಿ ಸಂಯೋಜಕ ಗಜಾನನ ಭಟ್, ವಿಜ್ಞಾನ ವಿಭಾಗದ ಡೀನ್ ಡಾ. ಸವಿತಾ ಕುಮಾರಿ ಹಾಗೂ ವಾಣಿಜ್ಯ ವಿಭಾಗದ ಡೀನ್ ಎಂ.ಎಸ್. ಶಕುಂತಲಾ, ಲೆಕ್ಕ ಪತ್ರ ವಿಭಾಗದ ಮುಖ್ಯಸ್ಥ ದಿವಾಕರ್ ಪಟವರ್ಧನ್, ಉಪನ್ಯಾಸಕರಾದ ಭಾಗ್ಯಶ್ರೀ ಮತ್ತು ಡಾ. ಶಿವಕುಮಾರ್ ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು ಭಾಗಿಯಾಗಿದ್ದರು.
ಕಾರ್ಯಕ್ರಮವನ್ನು ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ನಟರಾಜ್ ಹೆಚ್.ಕೆ. ಸಂಯೋಜಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಮಾನವ್ ಸ್ವಾಗತಿಸಿ, ವಿದ್ಯಾರ್ಥಿನಿ ಅಚಲ ನಿರೂಪಿಸಿ, ವಂದಿಸಿದರು.