ವೃತ್ತಿಯಲ್ಲಿ ಶಿಸ್ತು, ಸೇವಾಮನೋಭಾವ ಮತ್ತು ಪ್ರಾಮಾಣಿಕತೆ ಇದ್ದಾಗ ಉನ್ನತ ಸಾಧನೆ ಸಾಧ್ಯ: ಲಕ್ಷ್ಮೀನಾರಾಯಣ ರಾವ್
Friday, January 30, 2026
ಉಜಿರೆ: ವೃತ್ತಿಯಲ್ಲಿ ಶಿಸ್ತು, ಸೇವಾಮನೋಭಾವ ಮತ್ತು ಪ್ರಾಮಾಣಿಕತೆ ಇದ್ದಾಗ ಉನ್ನತ ಸಾಧನೆ ಮತ್ತು ಯಶಸ್ಸು ಸಾಧ್ಯವಾಗುತ್ತದೆ ಎಂದು ಧರ್ಮಸ್ಥಳ ದೇವಸ್ಥಾನದ ಪಾರುಪತ್ಯಗಾರರಾದ ಲಕ್ಷ್ಮೀನಾರಾಯಣ ರಾವ್ ಹೇಳಿದರು.
ಅವರು ಶುಕ್ರವಾರ ಉಜಿರೆಯಲ್ಲಿರುವ ರುಡ್‌ಸೆಟ್ ಸಂಸ್ಥೆಯಲ್ಲಿ ವಿದ್ಯುತ್ ಉಪಕರಣಗಳ ದುರಸ್ತಿ ಮತ್ತು ದ್ವಿಚಕ್ರ ವಾಹನಗಳ ರಿಪೇರಿ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿ ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು.
ಅಧ್ಯಕ್ಷತೆ ವಹಿಸಿದ ರುಡ್‌ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕ ಬಿ.ಪಿ. ವಿಜಯಕುಮಾರ್ ಮಾತನಾಡಿ, ಸರ್ಕಾರ ಹಾಗೂ ಬ್ಯಾಂಕ್‌ನ ಸೌಲಭ್ಯಗಳ ಸದುಪಯೋಗ ಪಡೆದು ಸ್ವ-ಉದ್ಯೋಗ ಪ್ರಾರಂಭಿಸಿ ಸ್ವಾವಲಂಬಿ ಜೀವನ ನಡೆಸಬೇಕು ಎಂದು ಶಿಬಿರಾರ್ಥಿಗಳಿಗೆ ಸಲಹೆ ನೀಡಿದರು.
ಸಂಸ್ಥೆಯ ನಿರ್ದೇಶಕ ಅಜೇಯ ಸ್ವಾಗತಿಸಿದರು. ಹಿರಿಯ ಉಪನ್ಯಾಸಕ ಕರುಣಾಕರ ಜೈನ್ ವಂದಿಸಿದರು. ಹಿರಿಯ ಉಪನ್ಯಾಸಕ ಅಬ್ರಹಾಂ ಜೇಮ್ಸ್ ಕಾರ್ಯಕ್ರಮ ನಿರ್ವಹಿಸಿರು.
