ಫೆ.1 ರಿಂದ ಶ್ರೀ ಉಮಾಮೇಶ್ವರೀ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ
ಶ್ರೀ ಉಮಾಮಹೇಶ್ವರೀ ದೇವಸ್ಥಾನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಸತೀಶ್ ಕುಂಪಲ ಮಾಹಿತಿ ನೀಡಿ, ಶ್ರೀ ಕ್ಷೇತ್ರದ ತಂತ್ರಿ ಕುಂಟಾರು ರವೀಶ್ ತಂತ್ರಿಯವರ ನೇತೃತ್ವದಲ್ಲಿ ಅಷ್ಟಬಂಧ ಬ್ರಹ್ಮ ಕಲಶೋತ್ಸವ ಮತ್ತು ಭದ್ರಕಾಳಿ ಪ್ರತಿಷ್ಠೆ ನಡೆಯಲಿದ್ದು, ಫೆ.1 ರಂದು ಸಂಜೆ 6 ಗಂಟೆಯಿಂದ ವೈಧಿಕ ಕಾರ್ಯಕ್ರಮಗಳು ನಡೆಯಲಿವೆ ಎಂದರು.
ಫೆ.2 ರಿಂದ ಫೆ.6 ರ ವರೆಗೆ ಮಹಾಪೂಜೆ, ಸಭಾ ಕಾರ್ಯಕ್ರಮ ಸಹಿತ ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ಫೆ.7 ಮತ್ತು ೮ರಂದು ವಾರ್ಷಿಕ ಜಾತ್ರಾ ಮಹೋತ್ಸವ ನಡೆಯಲಿದ್ದು, ಬೆಳಗ್ಗೆ 9 ಗಂಟೆಯಿಂದ ಗಣಪತಿ ಹೋಮ, ನವಕ ಕಲಶಾಭಿಷೇಕ ಮಧ್ಯಾಹ್ನ 12.30ರಿಂದ ಮಹಾಪೂಜೆ, ಪ್ರಸಾದ ವಿತರಣೆ, ಮಧ್ಯಾಹ್ನ 1 ಗಂಟೆಯಿಂದ ಮಹಾ ಅನ್ನ ಸಂತರ್ಪಣೆ, ರಾತ್ರಿ 7 ಗಂಟೆಯಿಂದ ಸಾಮೂಹಿಕ ರಂಗಪೂಜೆ, ಮಹಾಪೂಜೆ, ಅನ್ನಸಂತರ್ಪಣೆ ರಾತ್ರಿ 8ರಿಂದ ಶ್ರೀ ಭೂತ ಬಲಿ ಉತ್ಸವ ನಡೆಯಲಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಶ್ರೀ ಕ್ಷೇತ್ರದ ಆಡಳಿತ ಮೊಕ್ತೇಸರ ಎ.ಜೆ. ಶೇಖರ್, ಆಡಳಿತ ಮಂಡಳಿ ಪ್ರ. ಕಾರ್ಯದರ್ಶಿ ದಿನೇಶ್ ಕೆ. ಅತ್ತಾವರ, ಸೇವಾ ಸಮಿತಿ ಅಧ್ಯಕ್ಷ ದಿನೇಶ್ ರೈ ಕಳ್ಳಿಗೆ, ಪ್ರ. ಕಾರ್ಯದರ್ಶಿ ಗಣೇಶ್ ಕಾಪಿಕಾಡು, ಬ್ರಹ್ಮಕಲಶೋತ್ಸವ ಸಮಿತಿ ಪ್ರ. ಕಾರ್ಯದರ್ಶಿ ಗೋಪಿನಾಥ್ ಕಾಪಿಕಾಡು, ಪ್ರಚಾರ ಸಮಿತಿ ಅಧ್ಯಕ್ಷ ಜಗದೀಶ್ ಆಚಾರ್ಯ ತೊಕ್ಕೊಟ್ಟು ಉಪಸ್ಥಿತರಿದ್ದರು.