ಗಾಯಗೊಂಡಿದ್ದ ಸವಾರ ಚಿಕಿತ್ಸೆ ಫಲಿಸದೆ ಮೃತ್ಯು
Sunday, January 11, 2026
ಉಳ್ಳಾಲ: ಕಾರಿಗೆ ಸ್ಕೂಟರ್ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ.
ಮೃತ ವ್ಯಕ್ತಿಯನ್ನು ಮುಹಮ್ಮದ್ ಮಹಾಝ್ ಬಟ್ಟಪ್ಪಾಡಿ (24) ಎಂದು ಗುರುತಿಸಲಾಗಿದೆ.
ಘಟನೆ ವಿವರ:
ಅಹ್ಮದ್ ಹಾಶೀರ್ ಹಾಗೂ ಮುಹಮ್ಮದ್ ಮಹಾಝ್ ಜ.5 ರಂದು ರಾತ್ರಿ ಮಂಗಳೂರಿನಲ್ಲಿ ಕ್ಯಾಟರಿಂಗ್ ಕೇಲಸ ಮುಗಿಸಿ ಸ್ಕೂಟರ್‌ನಲ್ಲಿ ಊರಿಗೆ ಮರಳುತ್ತಿದ್ದರು. ಈ ವೇಳೆ ಬೀರಿ ಬಳಿ ಸ್ಕೂಟರ್ ತಲಪಾಡಿ ಕಡೆ ಹೋಗುತ್ತಿದ್ದ ಕಾರಿಗೆ ಢಿಕ್ಕಿ ಆಗಿದೆ. ಇದರಿಂದ ಅವರು ರಸ್ತೆಗೆ ಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದು, ಅವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಬಳಿಕ ಹೆಚ್ಚುವರಿ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ತಡರಾತ್ರಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಮಂಗಳೂರು ದಕ್ಷಿಣ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.