ಶಾಸಕ ಮಂಜುನಾಥ ಭಂಡಾರಿ ಅರೋಗ್ಯ ವಿಚಾರಿಸಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
Thursday, February 19, 2026
ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಅವರ ಆರೋಗ್ಯವನ್ನು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಇಂದು ಸದಾಶಿವನಗರದಲ್ಲಿರುವ ನಿವಾಸದಲ್ಲಿ ಭೇಟಿ ನೀಡಿ ವಿಚಾರಿಸಿದರು.
ಈ ಸಂದರ್ಭದಲ್ಲಿ ಅವರು ಮಂಜುನಾಥ ಭಂಡಾರಿ ಅವರ ಕುಟುಂಬ ಸದಸ್ಯರೊಂದಿಗೆ ಸಮಾಲೋಚನೆ ನಡೆಸಿ ಭಂಡಾರಿ ಅವರು ಶೀಘ್ರ ಗುಣಮುಖರಾಗಿ ಸಾರ್ವಜನಿಕ ಜೀವನದಲ್ಲಿ ಮತ್ತೆ ಚುರುಕಾಗಿ ಭಾಗವಹಿಸಲಿ ಎಂದು ಹಾರೈಸಿದರು.
