ನರೇಗಾದಲ್ಲಿ 100 ದಿನ ಇದ್ದ ಉದ್ಯೋಗ 125 ದಿನಕ್ಕೆ ಹೆಚ್ಚಿಸಿರುವುದು ಲಾಭನಾ? ನಷ್ಟನಾ?: ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು
ಬಿಜೆಪಿ ಬಂಟ್ವಾಳ ಮಂಡಲದ ವತಿಯಿಂದ ಹಮ್ಮಿಕೊಳ್ಳಲಾದ ಮಹಾತ್ಮ ಗಾಂಧಿ ನರೇಗಾ ಯೋಜನೆಯಲ್ಲಿನ ಭ್ರಷ್ಟಾಚಾರವನ್ನು ತೊಡೆದು ಹಾಕಲು ಹಾಗೂ ಕೇಂದ್ರ ಸರಕಾರದ ಹೊಸ ಕಾಯ್ದೆಯ ಬಗ್ಗೆ ಜನಜಾಗೃತಿ ಮೂಡಿಸಲು ಬುಧವಾರ ಬಿ.ಸಿ. ರೋಡಿನಲ್ಲಿ ಹಮ್ಮಿಕೊಳ್ಳಲಾದ ಪಾದಯಾತ್ರೆಯಲ್ಲಿ ಭಾಗವಹಿಸಿ ಬಳಿಕ ನಡೆದ ಸಭೆಯನ್ನುದ್ಧೇಶಿಸಿ ಅವರು ಮಾತನಾಡಿದರು.
ಕಾಯ್ದೆಗೆ ತಿದ್ದುಪಡಿ ತಂದು ಗ್ರಾಮೀಣ ಭಾಗದ ಜನರಿಗೆ ಉದ್ಯೋಗದ ಜೊತೆಗೆ ಭ್ರಷ್ಟಾಚಾರಕ್ಜೆ ಕಡಿವಣಾ ಹಾಕುವುದೇ ಕೇಂದ್ರ ಸರಕಾರದ ಗುರಿಯಾಗಿದೆ ಎಂದ ಅವರು ಕರ್ನಾಟಕ ಸರಕಾರ ಭ್ರಷ್ಟಾಚಾರದಲ್ಲಿ ಮುಳುಗಿದಿಯೇ ಹೊರತು ಪ್ರಧಾನಿ ಮೋದಿ ನೇತೃತ್ವದ ಕೇಂದ್ರದ ಸರಕಾರ ಜಾರಿಗೊಳಿಸಿರುವ ಜನಪರವಾದ ಯೋಜನೆಗಳಿಗೆ ಅಸಹಕಾರವನ್ನು ನೀಡುತ್ತಿದೆ ಎಂದು ಆರೋಪಿಸಿದರು.
ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಬಹುತೇಕ ಗ್ರಾ.ಪಂ.ಗಳಲ್ಲಿ ಜಿ.ರಾಮ್ ಜಿ.ಕಾಯ್ದೆಯ ಪರವಾಗಿ ನಿರ್ಣಯ ಮಾಡಿ ಸರಕಾರಕ್ಕೆ ಕಳುಹಿಸಿರುವುದು ಸಂತಸದ ವಿಚಾರವಾಗಿದೆ, ಮುಂದಿನ ದಿನಗಳಲ್ಲಿ ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲು ಹೊಸ ಕಾಯ್ದೆಯ ಮೂಲಕ ಗ್ರಾಮೀಣ ಜನರಿಗೆ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ಹೇಳಿದರು.
ಹತಾಶೆಯಿಂದ ವಿರೋಧ:
ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಮಾತನಾಡಿ, ಹತಾಶೆ ಭಾವನೆಯಿಂದ ಕಾಂಗ್ರೆಸ್ ಪಕ್ಷ ಜಿ.ರಾಮ್.ಜಿ.ಯನ್ನು ವಿರೋಧಿಸುತ್ತಿದ್ದು, ಮುಖ್ಯಮಂತ್ರಿ ಸ್ಥಾನದ ಬಗ್ಗೆ ಚರ್ಚೆಯಾಗುತ್ತಿದ್ದು, ಕುರ್ಚಿಯನ್ನು ಉಳಿಸಿಕೊಳ್ಳಲು ಅಭಿಯಾನದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದರು.
ಗ್ಯಾರಂಟಿ ಯೋಜನೆ ನೆಪದಲ್ಲಿ ಜನರನ್ನು ಮೋಸಮಾಡಲಾಗುತ್ತಿದ್ದು, ಸರಕಾರ ಅಭಿವೃದ್ದಿಯ ಬಗ್ಗೆ ಗಮನನೀಡದೆ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಆರೋಪಿಸಿದರು.
ಗ್ರಾಮೀಣ ಜನರ ಕುರಿತಂತೆ ಮೋದಿಗಿರುವ ನಂಬಿಕೆ ಕಾಂಗ್ರೆಸ್ ಪಕ್ಷಕ್ಕಿಲ್ಲ ಎಂದು ಹೇಳಿದ ಅವರು ರಾಜ್ಯವನ್ನು ಕುಡುಕರ ರಾಜ್ಯವನ್ನಾಗಿಸಲು ಹೊರಟಿರುವ ಕಾಂಗ್ರೆಸ್ ಸರಕಾರ ಗಾಂಧೀಜಿಯವರ ಹೆಸರಿನಲ್ಲಿ ಭ್ರಷ್ಟಾಚಾರ ಮಾಡುತ್ತಿದೆ ಎಂದು ಹೇಳಿದರು.
ಇದಕ್ಕು ಮೊದಲು ಬಿ.ಸಿ.ರೋಡಿನ ಕೈಕಂಬ ಪೊಳಲಿ ದ್ವಾರದಿಂದ ಬಿ.ಸಿ.ರೋಡಿನ ಮೇಲ್ಸ್ ತುವೆಯ ತಳಭಾಗದಲ್ಲಿ ಸಂಪನ್ನಗೊಂಡಿತು.
ಬಿಜೆಪಿ ಬಂಟ್ವಾಳ ಮಂಡಲದ ಅಧ್ಯಕ್ಷ ಆರ್. ಚೆನ್ನಪ್ಪ ಕೋಟ್ಯಾನ್, ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ಪಕ್ಷದ ಪ್ರಮುಖರಾದ ಸುದರ್ಶನ ಬಜ, ಶಿವಪ್ರಸಾದ್ ಶೆಟ್ಟಿ, ದಿನೇಶ್ ಅಮ್ಟೂರು, ಮಾದವ ಮಾವೆ, ಸುಲೋಚನ ಜಿ.ಕೆ. ಭಟ್, ಸಂದೇಶ್ ಶೆಟ್ಟಿ, ರವೀಂದ್ರ ಕಂಬಳಿ, ತುಂಗಪ್ಪ ಬಂಗೇರ, ಡೊಂಬಯ್ಯ ಅರಳ, ರಾಮ್ ದಾಸ ಬಂಟ್ವಾಳ, ಪ್ರಭಾಕರ ಪ್ರಭು, ಪುರುಷೋತ್ತಮ ಶೆಟ್ಟಿ, ಕಮಲಾಕ್ಷಿ ಪೂಜಾರಿ, ದಿನೇಶ್ ಶೆಟ್ಟಿ ದಂಬೆ, ದಿನೇಶ್ ಭಂಡಾರಿ, ಪುರುಷೋತ್ತಮ ಸಾಲಿಯಾನ್, ಹರೀಶ್ ಆಚಾರ್ಯ, ಹರ್ಷಿಣಿ, ರವೀಶ್ ಶೆಟ್ಟಿ, ಅನಂದ ಶಂಭೂರು, ಪುರಸಭಾ ಸದಸ್ಯರು, ಗ್ರಾಮ ಪಂಚಾಯತ್ ಅಧ್ಯಕ್ಷರುಗಳು, ಸದಸ್ಯರುಗಳು, ಪಕ್ಷದ ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.