ಮನೆ ಬೆಂಕಿಗಾಹುತಿ: ಅಪಾರ ನಷ್ಟ

ಮನೆ ಬೆಂಕಿಗಾಹುತಿ: ಅಪಾರ ನಷ್ಟ


ಬಂಟ್ವಾಳ: ತಾಲೂಕಿನ ವೀರಕಂಭ ಗ್ರಾಮದ ಗಣೇಶ್ ಕೋಡಿ ಎಂಬಲ್ಲಿ ಆಕಸ್ಮಿಕವಾದ ಬೆಂಕಿ ಅವಘಡದಿಂದ ಮನೆಯೊಮನದು  ಬೆಂಕಿಗಾಹುತಿಯಾದ ಪರಿಣಾಮ ಲಕ್ಷಾಂತರ ರೂ. ನಷ್ಟವುಂಟಾದ ಘಟನೆ ನಡೆದಿದೆ.

ವೀರಕಂಭ ಗ್ರಾಮದ ಗಣೇಶ್ ಕೋಡಿ ನಿವಾಸಿ ರಾಜೇಶ್ವರಿ ಎಂಬವರ ಮನೆಗೆ ಬೆಂಕಿ ತಗುಲಿದ್ದು, ಮನೆಯೊಳಗಿದ್ದ ಬೆಲೆಬಾಳುವ ಸೊತ್ತುಗಳು, ಅಗತ್ಯ ದಾಖಲೆಗಳು, ಎಲೆಕ್ಟ್ರಾನಿಕ್ ವಸ್ತುಗಳು ಬೆಂಕಿಯ ಕೆನ್ನಾಲಗೆಗೆ ಸುಟ್ಟು ಕರಕಲಾಗಿದೆ.

ರಾಜೇಶ್ವರಿ ಅವರ ಮಕ್ಕಳಿಬ್ಬರು ಶಾಲೆಗೆ ತೆರಳಿದ್ದು, ರಾಜೇಶ್ವರಿಯವರು ಕಲ್ಲಡ್ಕದಲ್ಲಿರುವ ಆಡಿಕೆ ಗಾರ್ಬೆಜ್‌ಗೆ ಕೆಲಸಕ್ಕೆ ತೆರಳಿದ್ದರು. ಬೆಳಗ್ಗೆ ಸುಮಾರು 11 ಗಂಟೆ ಹೊತ್ತಿಗೆ ಆಕಸ್ಮಿಕ ಎಂಬಂತೆ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೆರೆಮನೆಯವರು ದಟ್ಟ ಹೊಗೆ ಬರುವುದನ್ನು ಗಮನಿಸಿದಾಗ ಬೆಂಕಿಯ ಜ್ವಾಲೆ ಮನೆಯನ್ನಾವರಿಸಿತ್ತು. ಕೂಡಲೇ ಮನೆಯವರಿಗೆ ಮಾಹಿತಿ ನೀಡಿದ್ದರು.

ಪಂಪ್ ಮೂಲಕ ನೀರು ಹಾಯಿಸಿ ಬೆಂಕಿಯನ್ನು ನಂದಿಸಲು ಹರಸಾಹಸ ಪಟ್ಟರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಅವರು ತಿಳಿಸಿದ್ದಾರೆ.

ವಿದ್ಯುತ್ ಮೀಟರ್ ಬೋರ್ಡ್‌ನಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಈ ಘಟನೆ ನಡೆದಿರಬಹುದೆಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಕಂದಾಯ ಅಧಿಕಾರಿಗಳು ಬೇಟಿ ನೀಡಿ ಪರಿಶೀಲಿಸಿ ನಷದಟದ ಬಗ್ಗೆ ಅಂದಾಜಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article