ತಾಯಿನಾಡು-ಗೋಳಿಹೊಳೆ ಶ್ರೀ ಸಿದ್ಧಲಿಂಗೇಶ್ವರ ದೇಗುಲದಲ್ಲಿ ಮಹಾ ಶಿವರಾತ್ರಿ ಆಚರಣೆ
Monday, February 16, 2026
ಬೈಂದೂರು: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಗೋಳಿಹೊಳೆ ಸಮೀಪದ ತಾಯಿನಾಡು ಶ್ರೀ ಅಮೃತೇಶ್ವರಿ ಹಾಗೂ ಶ್ರೀ ಸಿದ್ಧಲಿಂಗೇಶ್ವರ ದೇವಸ್ಥಾನದಲ್ಲಿ ಫೆ.15 ರಂದು ಮಹಾ ಶಿವರಾತ್ರಿ ಉತ್ಸವವು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ವೇ.ಮೂ. ನಾಗರಾಜ್ ಐತಾಳ್ ನಾಗೂರು ಇವರ ನೇತೃತ್ವದಲ್ಲಿ ವಿಜ್ರಂಭಣೆಯಿಂದ ನೆರವೇರಿತು.
ಅಂದು ಬೆಳಿಗ್ಗೆ ಗಣಪತಿ ದೇವರಿಗೆ ಆರು ಕಾಯಿ ಗಣಹೋಮ, ಶ್ರೀ ದೇವಿಗೆ ದುರ್ಗಾ ಹೋಮ, ಶ್ರೀ ವಿಷ್ಣುದೇವರಿಗೆ ವಿಷ್ಣು ಸಹಸ್ರನಾಮ ಪಾರಾಯಣ ನಡೆಯಿತು.
ಮಧ್ಯಾಹ್ನ 12.30ಕ್ಕೆ ಮಹಾಪೂಜೆ, ತೀರ್ಥ-ಪ್ರಸಾದ ವಿತರಣೆ, ಬಳಿಕ "ಮಹಾ ಅನ್ನ ಸಂತರ್ಪಣೆ" ಕಾರ್ಯಕ್ರಮ ನಡೆಯಿತು.
ಸಾಯಂಕಾಲ 6.30 ರಿಂದ ಶ್ರೀ ಸಿದ್ಧಲಿಂಗೇಶ್ವರ ದೇವರಿಗೆ ಏಕಾದಶ ರುದ್ರಾಭಿಷೇಕ, ಬಿಲ್ವಾರ್ಚನೆ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಿತು.
ರಾತ್ರಿ ಗಂಟೆ 10 ರಿಂದ ಮಧ್ಯ ರಾತ್ರಿಯ ತನಕ ಸ್ಥಳೀಯ ಭಜನಾ ಮಂಡಳಿ ಅವರಿಂದ ಭಜನಾ ಕಾರ್ಯಕ್ರಮ ನೆರವೇರಿತು.
ಈ ಸಂದರ್ಭದಲ್ಲಿ ದೇಗುಲದ ಮುಖ್ಯಸ್ತರಾದ ಜಯರಾಮ ಪೂಜಾರಿ ಕುಟುಂಬಸ್ಥರು ಹಾಗೂ ಊರ-ಪರವೂರ ಭಕ್ತಾದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

