ಫೆ.25 ರಂದು ಕಾರ್ಕಳಕ್ಕೆ ಮುಖ್ಯಮಂತ್ರಿ ಭೇಟಿ: ಕಾರ್ಕಳ ಕಾಂಗ್ರೆಸ್ ಪೂರ್ವಭಾವಿ ಸಭೆ

ಫೆ.25 ರಂದು ಕಾರ್ಕಳಕ್ಕೆ ಮುಖ್ಯಮಂತ್ರಿ ಭೇಟಿ: ಕಾರ್ಕಳ ಕಾಂಗ್ರೆಸ್ ಪೂರ್ವಭಾವಿ ಸಭೆ


ಕಾರ್ಕಳ: ಫೆ.25 ರಂದು ಕಾರ್ಕಳ ಕುಕ್ಕುಂದೂರು ಕಿಸಾನ್ ಸಭಾಂಗಣದ ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಗಮಿಸುತ್ತಿರುವ ಹಿನ್ನಲೆಯಲ್ಲಿ ಕಾರ್ಕಳ ಕಾಂಗ್ರೆಸ್ ಪೂರ್ವಭಾವಿ ಸಭೆ ನಡೆಯಿತು.

ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಕಾರ್ಕಳ ಕಾಂಗ್ರೆಸ್ ನಾಯಕ ಉದಯ ಶೆಟ್ಟಿ ಮುನಿಯಾಲು ಅವರು, ಮಾಜಿ ಮುಖ್ಯಮಂತ್ರಿ ಡಾ. ಎಂ. ವೀರಪ್ಪ ಮೊಯಿಲಿಯವರ ನೇತೃತ್ವದಲ್ಲಿ ನಿರ್ಮಾಣವಾದ ಕಿಸಾನ್ ಸಭಾದ ಸಭಾಂಗಣ ಉದ್ಘಾಟನೆಗೆ ಗ್ಯಾರಂಟಿ ಯೋಜನೆಗಳ ಸರದಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾರ್ಕಳಕ್ಕೆ ಆಗಮಿಸುತ್ತಿರುವುದು ಅತ್ಯಂತ ಹೆಮ್ಮೆಯ ಕ್ಷಣಗಳು, ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಗೊಳಿಸಲು ಎಲ್ಲರೂ ಕೈಜೋಡಿಸಬೇಕೆಂದು ಅವರು ಕರೆ ನೀಡಿದರು.

ಶಿಕ್ಷಣ ವಂಚಿತರಾಗಿ ಶಿಕ್ಷಣ ವಂಚಿತರಾದ ವಿದ್ಯಾರ್ಥಿಗಳಿಗೆಂದು ಕಿಸಾನ್ ಸಭಾ ಶಾಲೆಯನ್ನು ಅಂದಿನ ದಿನಗಳಲ್ಲಿ ಸ್ಥಾಪನೆ ಮಾಡಲಾಗಿತ್ತು, ಹಾಗೂ ರೈತರ ಪರವಾಗಿ ಕಾರ್ಕಳದ ಮೂಲೆ ಮೂಲೆಗಳಲ್ಲಿ ಹೋರಾಟ ಮುಂತಾದ ಚಟುವಟಿಕೆಗಳನ್ನು ನಡೆಸಲಾಗಿತ್ತು, ಆ ಸಂದರ್ಭದಲ್ಲಿ ಸ್ಥಾಪನೆಯಾದ ಕಿಸಾನ್ ಸಭಾದ ಸಭಾಂಗಣವು ನಿರ್ಮಾಣವಾಗಿ ಉದ್ಘಾಟನೆಗೊಳ್ಳುತ್ತಿದ್ದು, ಕಾರ್ಯಕ್ರಮವನ್ನು ಯಶಸ್ವಿಗೊಳಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಹಿರಿಯ ಕಾಂಗ್ರೆಸ್ ನಾಯಕ ಶೇಖರ ಮಡಿವಾಳ ಹೇಳಿದರು.

ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ್ ರಾವ್ ಮಾತನಾಡಿ, ಜನಪರ ಯೋಜನೆಗಳ ಮೂಲಕ ಜನಮನವನ್ನು ಗೆದ್ದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾರ್ಕಳಕ್ಕೆ ಆಗಮಿಸುತ್ತಿರುವುದು ಅತ್ಯಂತ ಸಂತಸ ಮತ್ತು ಹೆಮ್ಮೆಯ ವಿಚಾರವಾಗಿದೆ, ಮುಖ್ಯಮಂತ್ರಿಗಳನ್ನು ಸ್ವಾಗತಿಸಲು ನಾವೆಲ್ಲರೂ ಉತ್ಸೂಕರಾಗಿದ್ದೇವೆ, ಈ ನಿಟ್ಟಿನಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.

ಹೆಬ್ರಿ ಬ್ಲಾಕ್ ಅಧ್ಯಕ್ಷ ಗೋಪೀನಾಥ್ ಭಟ್, ಜಿಲ್ಲಾ ಉಪಾದ್ಯಕ್ಷ ಸುಧಾಕರ ಕೋಟ್ಯಾನ್, ಬ್ಲಾಕ್ ಉಪಾಧ್ಯಕ್ಷ ಜಾರ್ಜ್ ಕ್ಯಾಸ್ತಲಿನೊ, ಅಬ್ದುಲ್ ಸಾಣೂರು, ಅಜಿತ್ ಹೆಗ್ಡೆ ಮಾಳ, ಭಾನು ಭಾಸ್ಕರ್ ಪೂಜಾರಿ, ಮಲಿಕ್ ಅತ್ತೂರು, ಸಿರಿಯಣ್ಣ ಶೆಟ್ಟಿ, ಕೆ.ಎಮ್.ಎಪ್ ನಿರ್ದೇಶಕರಾದ ಸುಧಾಕರ ಶೆಟ್ಟಿ ಮುಡಾರು, ಅನಿಲ್ ಪೂಜಾರಿ ನೆಲ್ಲಿಗುಡ್ಡೆ ಮತ್ತಿತರರು ಉಪಸ್ಥಿತರಿದ್ದರು. 

ಬ್ಲಾಕ್ ವಕ್ತಾರ ಪ್ರದೀಪ್ ಬೇಲಾಡಿ ಸ್ವಾಗತಿಸಿ, ಶೇಖ್ ಶಭೀರ್ ಮಿಯ್ಯಾರು ವಂದಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article