ಯುವ ಪ್ರಭಾವಿ ಇನ್ ಸ್ಟಾಗ್ರಾಂ ‘ಚಿನ್ನು ಪಾಪು’ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

ಯುವ ಪ್ರಭಾವಿ ಇನ್ ಸ್ಟಾಗ್ರಾಂ ‘ಚಿನ್ನು ಪಾಪು’ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ


ಕಾಸರಗೋಡು: ಮಂಗಳೂರು; ಇನ್‌ಸ್ಟಾಗ್ರಾಮ್‌ನಲ್ಲಿ ೨.೦೬ ಲಕ್ಷಕ್ಕೂ ಹೆಚ್ಚು ಫಾಲೋವರ್‌ಗಳನ್ನು ಹೊಂದಿದ್ದ ಸಾಮಾಜಿಕ ಮಾಧ್ಯಮದ ಯುವ ಪ್ರಭಾವಿ ‘ಚಿನ್ನು ಪಾಪು’ ಅವರು ಸೋಮವಾರ ಕಾಸರಗೋಡಿನಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. 

ಅವರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ‘ಚಿನ್ನು ಪಾಪು’ ಎಂದು ಪರಿಚಿತರಾಗಿದ್ದ ಅವರನ್ನು ದೇಲಂಪಾಡಿ ಪಂಚಾಯತ್ ನ ಅಧೂರ್ ಮೂಲದ ರೇಷ್ಮಾ (24) ಎಂದು ಗುರುತಿಸಲಾಗಿದೆ. ಕಾಸರಗೋಡು ಪಟ್ಟಣದ ಸಮೀಪದ ಉಳಿಯತಡ್ಕದಲ್ಲಿರುವ ತಮ್ಮ ಬಾಡಿಗೆ ಮನೆಯಲ್ಲಿ ಮಧ್ಯಾಹ್ನ ವೇಳೆಗೆ ನೇಣು ಬಿಗಿದ ಸ್ಥಿತಿಯಲ್ಲಿ ಅವರು ಪತ್ತೆಯಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ರೇಷ್ಮಾ ಅವರು ಪ್ರೇಮ ವಿವಾಹವಾಗಿದ್ದರೂ, ಒಂದು ತಿಂಗಳ ಹಿಂದಷ್ಟೇ ಪತಿಯಿಂದ ವಿಚ್ಛೇದನ ಪಡೆದಿದ್ದರು. ಅವರ ನಾಲ್ಕು ವರ್ಷದ ಮಗು ಅದೂರ್‌ನಲ್ಲಿ ಪೋಷಕರ ಮನೆಯಲ್ಲಿದೆ.

ಘಟನೆ ಬೆಳಕಿಗೆ ಬಂದ ತಕ್ಷಣ ನೆರೆಹೊರೆಯವರು ರೇಷ್ಮಾರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದರೂ, ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದರು. ಮಧ್ಯಾಹ್ನ ಸುಮಾರು 2 ಗಂಟೆ ವೇಳೆಗೆ ಪೋಷಕರಿಗೆ ಮಾಹಿತಿ ನೀಡಲಾಗಿದೆ.

'ಚಿನ್ನು ಪಾಪು' ಸಾಮಾಜಿಕ ಮಾಧ್ಯಮಗಳಲ್ಲಿ ಸಕ್ರಿಯರಾಗಿದ್ದು, ಗ್ರಾಮೀಣ ಜೀವನಶೈಲಿ, ಸ್ಥಳೀಯ ಆಹಾರ, ಪ್ರವಾಸಿ ಸ್ಥಳಗಳು ಹಾಗೂ ತುಳು ಭಾಷೆಯ ಕುರಿತ ವಿಚಾರಗಳ ಮೂಲಕ ಹೆಚ್ಚಿನ ಫಾಲೋವರ್ ಗಳನ್ನು ಹೊಂದಿದ್ದರು. ಸಾಮಾನ್ಯವಾಗಿ 7 ರಿಂದ 10 ದಿನಗಳಿಗೊಮ್ಮೆ ಕಂಟೆಂಟ್ ಗಳನ್ನು ಪೋಸ್ಟ್ ಮಾಡುತ್ತಿದ್ದರು. ಆರು ದಿನಗಳ ಹಿಂದಷ್ಟೇ ಹಂಚಿಕೊಂಡಿದ್ದ ತರಕಾರಿಯ ಕುರಿತ ಕೊನೆಯ ಪೋಸ್ಟ್‌ಗೆ ಸುಮಾರು 5,800 ಲೈಕ್ ಗಳು ಬಂದಿದ್ದವು.

ಪೊಲೀಸರು ಅಸ್ವಾಭಾವಿಕ ಸಾವಿನ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article